ಉಡುಪಿ: ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಕನ್ನಡ ಮಾಧ್ಯಮದ 11 ಮತ್ತು ಆಂಗ್ಲ ಮಾಧ್ಯಮದ 13 ವಿದ್ಯಾರ್ಥಿಗಳನ್ನು ಶನಿವಾರ ಜಿಲ್ಲಾ ಪಂಚಾಯತ್ನಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಸನ್ಮಾನಿಸಲಾಯಿತು.
ಉಡುಪಿ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ನಗದು ಬಹುಮಾನ, ಸ್ಮರಣಿಕೆ ಮತ್ತು ಅಭಿನಂದನಾ ಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಾಳಿ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಶೋಭಾ ಜಿ. ಪುತ್ರನ್, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸುಮಿತ್ ಶೆಟ್ಟಿ, ಶಾಸಕ ಕೆ. ರಘುಪತಿ ಭಟ್, ಜಿ.ಪಂ. ಸಿಇಒ ಪ್ರೀತಿ ಗೆಹ್ಲೋತ್, ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಡಿಡಿಪಿಐ ಶೇಷಶಯನ ಕಾರಿಂಜ, ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.