Wednesday, August 17, 2022

Latest Posts

ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಯಿಂದ ಹೆಲ್ತ್‌ ಬುಲೆಟಿನ್‌ ಬಿಡುಗಡೆ

ಚೆನ್ನೈ: ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ತೀವ್ರ ಗಂಭೀರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಬುಲೆಟಿನ್ ತಿಳಿಸಿದೆ.
ಅನಾರೋಗ್ಯದ ಕಾರಣ ಆಗಸ್ಟ್​​​ 5ರಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಖ್ಯಾತ ಹಿನ್ನೆಲೆ ಗಾಯಕ ಎಸ್​.ಪಿ ಬಾಲಸುಬ್ರಹ್ಮಣ್ಯಂ ಅವರಿಗೆ  ವೆಂಟಿಲೇಟರ್​ ಹಾಗೂ ಎಕ್ಮೋ ಮಷಿನ್​​ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ತಿಳಿಸಿದ್ದು, ಮುಂದಿನ 24 ಗಂಟೆಗಳ ಕಾಲ ಯಾವುದೇ ಸ್ಥಿತಿ ತಲುಪಬಹುದು ಎಂದಿದ್ದಾರೆ.
ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ಇಟ್ಟಿದ್ದು, ಸೂಕ್ಷ್ಮವಾಗಿ ಗಮನ ಇಟ್ಟಿದೆ ಎಂದು ಹೇಳಿದೆ. ಕಳೆದ ಎರಡು ವಾರಗಳಿಂದ ಎಸ್ ಪಿಬಿ ಸುಧಾರಣೆಯ ಲಕ್ಷಣಗಳನ್ನು ತೋರಿಸುತ್ತಿತ್ತು.

ಎಸ್​ಪಿಬಿ ಅವರಿಗೆ ಆಗಸ್ಟ್ 5ರಂದು ಕೊರೋನಾ ಸೋಂಕು ದೃಢವಾಗಿತ್ತು. ಅದೇ ದಿನ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಎಸ್​ಪಿಬಿ ಗುಣಮುಖರಾಗಿ ಬರಲೆಂದು ಚಿತ್ರರಂಗ ಸೇರಿದಂತೆ ಅನೇಕರು ಪ್ರಾರ್ಥಿಸಿದ್ದರು. ಹೀಗಿರುವಾಗ ಆಗಸ್ಟ್ 28ರಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿತ್ತು. ಅಲ್ಲದೆ, ಕರೊನಾ ನಗೆಟಿವ್​ ಸಹ ಆಗಿತ್ತು. ಈ ಬಗ್ಗೆ ಎಸ್​ಪಿಬಿ ಮಗ ಎಸ್.ಪಿ. ಚರಣ್​ ಮಾಧ್ಯಮಗಳಿಗೆ ತಿಳಿಸಿದ್ದರು.
ಇನ್ನೇನು ಬಿಡುಗಡೆಯಾಗಲಿದ್ದಾರೆ ಎನ್ನುವಷ್ಟರಲ್ಲಿ ಇದೀಗ ಮತ್ತೆ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಕೆಲವು ದಿನಗಳಿಂದ ಆರೋಗ್ಯ ಸ್ಥಿತಿ ಬಿಗಡಾಯಿಸುತ್ತಿದ್ದು, ಯಾವುದೇ ಚೇತರಿಕೆ ಕಂಡುಬಂದಿಲ್ಲ ಎಂದು ವೈದ್ಯರು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!