Monday, August 15, 2022

Latest Posts

ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಕಂಬನಿ ಮಿಡಿದ ಭಾರತದ ಸಮಸ್ತ ಚಿತ್ರರಂಗ!

ಬೆಂಗಳೂರು: ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಭಾರತದ ಸಮಸ್ತ ಚಿತ್ರರಂಗವೇ ಕಂಬನಿ ಮಿಡಿದಿದೆ . ಭಾರತ ಚಿತ್ರರಂಗ ಹಾಗೂ ಸಂಗೀತ ಲೋಕದ ಅನೇಕರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ಗಾಯಕಿಯರಾದ ಕೆ ಎಸ್ ಚಿತ್ರಾ, ಸಂಗೀತಾ ಕಟ್ಟಿ, ಅರ್ಚನಾ ಉಡುಪ, ಚಿತ್ರ ಸಾಹಿತಿ ಕೆ.ಕಲ್ಯಾಣ್, ಯೋಗರಾಜ್ ಭಟ್, ಟಿಎನ್‌ ಸೀತಾರಾಮ್, ಸಂಗೀತ ನಿರ್ದೇಶಕ ವಿ.ಮನೋಹರ್, ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮೊದಲಾದವರು ಸಂತಾಪ ಸೂಚಿಸಿದ್ದಾರೆ.
ಜಗ್ಗೇಶ್, ಶಿವರಾಜ್‌ಕುಮಾರ್, ದರ್ಶನ್,ಪುನೀತ್ ರಾಜ್‌ಕುಮಾರ್, ತೆಲುಗು ನಟ ಮಹೇಶ್ ಬಾಬು, ನಟ ರಾಮ್ ಚರಣ್,ನಟ ಜ್ಯೂನಿಯರ್ ಎನ್‌ಟಿಆರ್, ಹಿಂದಿ ನಟ ಅಕ್ಷಯ್ ಕುಮಾರ್, ರಮೇಶ್ ಅರವಿಂದ್, ರಕ್ಷಿತ್ ಶೆಟ್ಟಿ, ಸಿಂಪಲ್ ಸುನಿ, ಸಂತೋಷ್ ಆನಂದರಾಮ್, ಉಪೇಂದ್ರ, ಯುವ ರಾಜ್‌ಕುಮಾರ್, ನಿರ್ದೇಶಕ ಪವನ್ ಒಡೆಯರ್ ಮೊದಲಾದ ನಟ ನಟಿಯರು ಎಸ್ ಪಿಬಿ ಅವರ ನಿಧನಕ್ಕೆ ಕಂಬಿನಿ ಮಿಡಿದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss