ಫಿಲ್ಮ್ ಅಂಡ್ ಟೆಲಿವಿಷನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಸೊಸೈಟಿಯ ನೂತನ ಅಧ್ಯಕ್ಷರನ್ನಾಗಿ ಖ್ಯಾತ ನಿರ್ಮಾಪಕ ಶೇಖರ್ ಕಪೂರ್ ಅವರನ್ನು ನೇಮಕ ಮಾಡಲಾಗಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ನಡೆಯುತ್ತಿರುವ ಈ ಪ್ರತಿಷ್ಠಿತ ಚಲನಚಿತ್ರ ಶಾಲೆ ಪುಣೆಯಲ್ಲಿದ್ದು, ಈ ಶಾಲೆಗೆ ಶೇಖರ್ ಕಪೂರ್ ನೂತನ ಸಾರಥಿಯನ್ನಾಗಿ ನೇಮಕಗೊಳಿಸಲಾಗಿದೆ ಎಂದು ಮಂಗಳವಾರ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಪ್ರಕಟಿಸಿದ್ದಾರೆ.
ಹೆಸರಾಂತ ಶೇಖರ್ ಕಪೂರ್ ಅವರನ್ನು ಎಫ್ಟಿಐಐ ಸೊಸೈಟಿಯ ಅಧ್ಯಕ್ಷರಾಗಿ ಮತ್ತು ಎಫ್ಟಿಐಐನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಲು ಸಂತೋಷವಾಗಿದೆ’’ ಎಂದು ಪ್ರಕಾಶ್ ಜಾವಡೇಕರ್ ಟ್ವೀಟ್ ಮಾಡಿ ಅಭಿನಂದಿಸಿದ್ದಾರೆ.
ಎಫ್ಟಿಐಐ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶೇಖರ್ ಕಪೂರ್ ಅವರಿಗೆ ನಟಿ ಕಂಗನಾ ರಣಾವತ್ ಶುಭಕೋರಿದ್ದಾರೆ. ’’ಅದ್ಭುತ ಸುದ್ದಿ, ಅಭಿನಂದನೆಗಳು ಸರ್, ಇನ್ನೂ ಇಂತಹ ಜವಾಬ್ದಾರಿಯುತ ಸ್ಥಾನಗಳಲ್ಲಿ ನಿಮ್ಮನ್ನು ನೋಡಲು ಆಶಿಸುತ್ತೇವೆ. ನಿಮ್ಮ ಮಾರ್ಗದರ್ಶನ ನಮಗೆ ಬೇಕು’’ ಎಂದು ಟ್ವೀಟ್ ಮಾಡಿದ್ದಾರೆ.