ಹೊಸದಿಗಂತ ಆನ್ ಲೈನ್ ಡೆಸ್ಕ್:
ಏಷ್ಯಾದ ಅತಿದೊಡ್ಡ ಕೊಳಗೇರಿ ಪ್ರದೇಶವಾಗಿರುವ ಮುಂಬೈನ ಧಾರಾವಿಯಲ್ಲಿ ಕಳೆದ 24 ಗಂಟೆಗಳಲ್ಲಿ ಒಂದೇ ಒಂದು ಕೊರೋನಾ ವೈರಸ್ ಪ್ರಕರಣ ವರದಿಯಾಗಿಲ್ಲ ಎಂದು ಎಂದು ನಾಗರಿಕ ಅಧಿಕಾರಿಯೊಬ್ಬರು ಶುಕ್ರವಾರ ಸಂಜೆ ತಿಳಿಸಿದ್ದಾರೆ.
ಅತಿ ಹೆಚ್ಚು ಜನದಟ್ಟಣೆಯ ಸ್ಲಂಗಳಲ್ಲಿ ಒಂದಾಗಿರುವ ಮುಂಬೈನ ಧಾರಾವಿ ಯಲ್ಲಿ ಏಪ್ರಿಲ್ 1 ರ ನಂತರ ಇದೇ ಮೊದಲ ಬಾರಿಗೆ ಒಂದೇ ಒಂದು ಪ್ರಕರಣ ಕೂಡ ದಾಖಲಾಗಿಲ್ಲ. ಸದ್ಯಕ್ಕೆ ಈ ಪ್ರದೇಶದಲ್ಲಿ 12 ಸಕ್ರಿಯ ಪ್ರಕರಣಗಳಿದ್ದು, 8 ಜನ ಪ್ರತ್ಯೇಕ ವಾಸದಲ್ಲಿದ್ದಾರೆ. ನಾಲ್ವರು ಸೋಂಕಿತರು ಕೋವಿಡ್ ಆರೈಕೆ ಕೇಂದ್ರದಲ್ಲಿದ್ದರೆ ಎಂದು ಹೇಳಲಾಗಿದೆ.
ಧಾರಾವಿಯಲ್ಲಿ ಈವರೆಗೆ 3,464 ಜನರು ಚೇತರಿಸಿಕೊಂಡಿದ್ದಾರೆ, ಅಲ್ಲಿ 6.5 ಲಕ್ಷ ಜನರು 2.5 ಚದರ ಕಿಲೋಮೀಟರ್ ಪ್ರದೇಶದಲ್ಲಿ ಹರಡಿರುವ ಕೊಳೆಗೇರಿಯಲ್ಲಿ ನೆಲೆಸಿದ್ದಾರೆ.