Monday, July 4, 2022

Latest Posts

ಏಪ್ರಿಲ್ 21ರಂದು ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನಾಗಿ ಆಚರಣೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಏಪ್ರಿಲ್ 21ರಂದು ನಾಗರೀಕ ಸೇವಾ ದಿನವನ್ನು ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನಾಗಿ ಆಚರಿಸಲು ರಾಜ್ಯ ಸರಕಾರ ಘೋಷಣೆ ಮಾಡಿದೆ.
ಈ ಕುರಿತಂತೆ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎನ್ ಎಸ್ ಗಾಯತ್ರಿದೇವಿ ಸುತ್ತೋಲೆ ಹೊರಡಿಸಿದ್ದು, ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯು ರಾಜ್ಯ ಸರ್ಕಾರದ ಕಾರ್ಯಾಂಗದ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳೂ ಸೇರಿದಂತೆ ರಾಜ್ಯ, ಜಿಲ್ಲಾ, ತಾಲೂಕು ಮಟ್ಟದ ಎಲ್ಲಾ ಅಧಿಕಾರಿ, ನೌಕರರನ್ನು ಒಳಗೊಂಡು ದಿನಾಚರಣೆಯನ್ನು ಆಚರಿಸಲು ಉದ್ದೇಶಿಸಲಾಗಿದೆ.
ಆದ್ದರಿಂದ ಕೇಂದ್ರ ಸರ್ಕಾರದ ಮಾದರಿಯನ್ವಯ ರಾಜ್ಯದಲ್ಲಿ ನಾಗರೀಕ ಸೇವಾ ದಿನವನ್ನು ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನಾಗಿ ಏಪ್ರಿಲ್ 21ರಂದು ನಿಗದಿ ಪಡಿಸಿ, ವಿವಿಧ ಕಾರ್ಯಕ್ರಮಗಳ ಮೂಲಕ ದಿನಾಚರಣೆಯನ್ನು ಆಚರಿಸಿ, ಅತ್ಯುತ್ತಮ ಸೇವೆ ಸಲ್ಲಿಸಿದ ನೌಕರರಿಗೆ ಜನವರಿ 26ರ ಗಣರಾಜ್ಯೋತ್ಸವ ದಿನದಂದು ನೀಡುತ್ತಿರುವ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯಂದು ನೀಡುವುದರ ಮೂಲಕ ಅವಿಸ್ಮರಣೀಯಗೊಳಿಸಲು ತೀರ್ಮಾನಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss