ಏಸುಕ್ರಿಸ್ತ ಪತ್ರಿಮೆ ನಿರ್ಮಾಣಕ್ಕೆ ತಾತ್ಕಲಿಕ ಬ್ರೇಕ್

0
178

ರಾಮನಗರ: ಕಪಾಲಿಬೆಟ್ಟದಲ್ಲಿ ವಿಶ್ವದ ಎತ್ತರದ ಏಸುಕ್ರಿಸ್ತನ ಪ್ರತಿಮೆ ನಿರ್ಮಾಣ ಕಾರ್ಯವನ್ನು ತಾತ್ಕಲಿಕವಾಗಿ ಸ್ಥಗಿತಗೊಳಿಸಿದ್ದು, ಸ್ಥಳಕ್ಕೆ ಪೊಲೀಸರ ನಿಯೋಜನೆ ಮಾಡಲಾಗಿದೆ.

ಇತ್ತೀಚಿಗೆ ಕಪಾಲ ಬೆಟ್ಟದಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಏಸು ಪ್ರತಿಮೆ ಕಾಮಗಾರಿಗೆ ಶಿಲಾನ್ಯಾಸ ಮಾಡಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಡಿ.28ರಿಂದ ಪ್ರತಿಮೆ ನಿರ್ಮಾಣ ಕಾರ್ಯ ಸ್ಥಗಿತಗೊಳಿಸಲಾಗಿದೆ. ಸಾತನೂರು ಪೊಲೀಸರು ಕಪಾಲಿಬೆಟ್ಟದಲ್ಲಿ ಬಿಗಿ ಭದ್ರತೆಗಾಗಿ ಕಾವಲು ಕಾಯುತ್ತಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ.

ಕಪಾಲಿಬೆಟ್ಟದಲ್ಲಿ 115 ಅಡಿ ಎತ್ತರದ ಏಸು ಪ್ರತಿಮೆ ನಿರ್ಮಾಣಕ್ಕೆ ಸಿದ್ಧತೆ ನಡೆಸಲಾಗಿದ್ದು, ಈ ಬಗ್ಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು.

LEAVE A REPLY

Please enter your comment!
Please enter your name here