Tuesday, June 28, 2022

Latest Posts

ಐಎಂಎ ಜ್ಯುವೆಲ್ಲರಿ ಹಗರಣದಲ್ಲಿ ಬಿಗ್ ಟ್ವಿಸ್ಟ್: ನಿಂಬಾಳ್ಕರ್, ಹಿಲೋರಿ ವಿಚಾರಣೆಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ!

ಬೆಂಗಳೂರು: 2019ರ ಜೂನ್ ನಲ್ಲಿ ನಡೆದ ಐಎಂಎ ಜ್ಯುವೆಲ್ಲರಿ ಹಗರಣ ಸಂಬಂಧ ರಾಜ್ಯ ಸರ್ಕಾರ, ಐಪಿಎಸ್ ಅಧಿಕಾರಿಗಳಾದ ಹೇಮಂತ್ ಎಂ. ನಿಂಬಾಳ್ಕರ್ ಹಾಗೂ ಅಜಯ್ ಹಿಲೋರಿ ವಿರುದ್ಧ ಕಾನೂನು ಕ್ರಮದಡಿ ವಿಚಾರಣೆ ನಡೆಸಬಹುದು ಎಂದು ಸಿಬಿಐಗೆ ಹೇಳಿದೆ.
ಐಎಂಎ ಜ್ಯುವೆಲ್ಲರಿ ಹಗರಣ ಬಯಲಿಗೆ ಬಂದ ಸಂದರ್ಭ ರಾಜ್ಯದಲ್ಲಿ ಜೆಡಿಎಸ್ -ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿತ್ತು. ಈ ಹಗರಣದಲ್ಲಿ ದೊಡ್ಡ ದೊಡ್ಡ ರಾಜಕಾರಣಿಗಳ ಹೆಸರು ಕೇಳಿ ಬಂದಿತ್ತು. ಸದ್ಯ ಈ ಪ್ರಕರಣದ ಸಂಬಂಧ ಐಪಿಎಸ್ ಅಧಿಕಾರಿಗಳಾದ ಹೇಮಂತ್ ಎಂ. ನಿಂಬಾಳ್ಕರ್ ಹಾಗೂ ಅಜಯ್ ಹಿಲೋರಿ ಅವರನ್ನ ವಿಚಾರಣೆ ಮಾಡಬಹುದು ಎಂದು ಸರ್ಕಾರ ಸಿಬಿಐಗೆ ತಿಳಿಸಿದೆ.
ಕರ್ನಾಟಕ ಪೊಲೀಸ್ ಕಾಯ್ದೆ 1963ರ ಅಪರಾಧ ದಂಡ ಸಂಹಿತೆ ಸೆಕ್ಷನ್ 197, 170ರ ಅಡಿ ಅನುಮತಿ ನೀಡಿದ್ದು, ಹೂಡಿಕೆದಾರರ ನೂರಾರು ಕೋಟಿ ರುಪಾಯಿ ವಂಚನೆಯಾದ ಹಿನ್ನೆಲೆಯಲ್ಲಿ ಹಗರಣದ ಪ್ರಮುಖ ಆರೋಪಿ, ಐಎಂಎ ಜ್ಯುವೆಲ್ಲರಿ ಮಾಲೀಕ ಮೊಹ್ಮದ್ ಮನ್ಸೂರ್ ಖಾನ್ ನನ್ನು ಬಂಧಿಸಲಾಗಿದ್ದು ಜೈಲಿನಲ್ಲಿ ಇದ್ದಾನೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss