ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಮಾಜಿ ಸಚಿವ ಆರ್. ರೋಷನ್ ಬೇಗ್ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.
ಪ್ರತಿ ಎರಡನೇ ಮತ್ತು ನಾಲ್ಕನೇ ಸೋಮವಾರ ಸಿಬಿಐ ಮುಂದೆ ಹಾಜರಾಗಬೇಕು. ಸಿಬಿಐ ನೋಟಿಸ್ ನೀಡಿದಾಗ ವಿಚಾರಣೆಗೆ ಹಾಜರಾಗಬೇಕು. ತನಿಖೆಗೆ ಸಹಕರಿಸಬೇಕು. ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ಪಾಸ್ಪೋರ್ಟ್ ಸರೆಂಡರ್ ಮಾಡಬೇಕು. ವಿಳಾಸ ಬದಲಾವಣೆ ಮಾಡಿದರೆ ಅಧಿಕಾರಿಗಳಿಗೆ ತಿಳಿಸಬೇಕು. ತನಿಖೆಗೆ ಪೂರ್ಣ ಸಹಕಾರ ನೀಡಬೇಕೆಂದು ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಲಾಗಿದೆ.