Wednesday, August 10, 2022

Latest Posts

ಐಎಎಸ್ ಅಧಿಕಾರ ಬಿಟ್ಟು ‘ಕೈ’ ಮಿಲಾಯಿಸಲಿದ್ದಾರೆ ಸಸಿಕಾಂತ್ ಸೆಂಥಿಲ್!

ಹೊಸದಿಗಂತ ಆನ್ ಲೈನ್ ಡೆಸ್ಕ್:

ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ಇತ್ತೀಚೆಗಷ್ಟೆ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಬಿಜೆಪಿಗೆ ಸೇರಿಕೊಂಡಿದ್ದ ಬೆನ್ನಲ್ಲೇ ಇದೀಗ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ನಾಳೆ ತಮಿಳುನಾಡಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅವರು ಅಧಿಕೃತ ಕಾಂಗ್ರೆಸ್ ಸೇರಲಿದ್ದಾರೆ.

ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅವರು, ಕಾಶ್ಮೀರದಲ್ಲಿ 370ನೇ ವಿಧಿ ರದ್ದುಗೊಳಿಸಿದ ವಿಚಾರವಾಗಿ ಸಿಂಥಿಲ್ ಅವರು ತಮ್ಮ ಅಧಿಕಾರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಅವರು ಸಿಎಎ, ಎನ್.ಆರ್.ಸಿ ವಿಚಾರವಾಗಿ ಹೋರಾಟಗಳಲ್ಲಿ ಭಾಗಿಯಾಗಿದ್ದರು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss