Sunday, August 14, 2022

Latest Posts

ಐತಿಹಾಸಿಕ ತೀರ್ಪು ಸ್ವಾಗತಾರ್ಹ: ರಕ್ಷಣಾ ಸಚಿವ ರಾಜನಾಥ್ ಸಿಂಗ್

ನವದೆಹಲಿ: ದೇಶವೇ ಕುತೂಹಲದಿಂದ ಎದುರು ನೋಡುತ್ತಿದ್ದ ಐತಿಹಾಸಿಕ ತೀರ್ಪು ಪ್ರಕಟವಾಗಿದ್ದು,
ಬಾಬರಿ ಕಟ್ಟಡ  ಧ್ವಂಸ ಪ್ರಕರಣದ ಎಲ್ಲಾ ಆರೋಪಿಗಳು ನಿರ್ದೋಷಿಗಳು ಎಂದು ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿರುವುದನ್ನು ಸ್ವಾಗತಿಸುತ್ತೇನೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ್ದು, ಬಿಜೆಪಿ ನಾಯಕರಾದ ಎಲ್.ಕೆ. ಅಡ್ವಾನಿ, ಮುರುಳಿ ಮನೋಹರ್ ಜೋಷಿ, ಮಾಜಿ ಸಚಿವರಾದ ಉಮಾ ಭಾರತಿ, ಕಲ್ಯಾಣ್ ಸಿಂಗ್ ಸೇರಿದಂತೆ ಎಲ್ಲರೂ ನಿರ್ದೋಶಿಗಳು ಎನ್ನಲಾಗಿದೆ. ಲಕ್ನೋದ ಸಿಸಿಬಿ ವಿಶೇಷ ಕೋರ್ಟ್ ನ್ಯಾಯಾಧೀಶ ಎಸ್.ಕೆ. ಯಾದವ್ ನೇತೃತ್ವದ ನ್ಯಾಯಾಪಿಠವು ತೀರ್ಪು ಪ್ರಕಟಿಸಿದೆ. ಎಷ್ಟೋ ವರ್ಷಗಳ ನಂತರ ತೀರ್ಪು ಬಂದಿದ್ದರೂ ಸರಿಯಾದ ತೀರ್ಪು ಇದಾಗಿದೆ. ತೀರ್ಪು ಸ್ವಾಗತಾರ್ಹ ಎಂದಿದ್ದಾರೆ.
ಬಾಬರಿ ಕಟ್ಟಡ ಧ್ವಂಸ ಪ್ರಕರಣದ ಐತಿಹಾಸಿಕ ತೀರ್ಪು ಇಂದು ಹೊರಬಿದ್ದಿದ್ದು, ಎಲ್ಲಾ 32  ಆರೋಪಿಗಳು ನಿರ್ದೋಶಿಗಳು ಎಂಬ ತೀರ್ಪು ಪ್ರಕಟಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss