Tuesday, November 24, 2020

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ಐತಿಹಾಸಿಕ ಪುರಾತನ ಸ್ಮಾರಕಗಳ ರಕ್ಷಣೆಗೆ ಇಲಾಖೆಯ ಅಧಿಕಾರಿಗಳು ಕ್ರಮವಹಿಸಬೇಕು: ಸಚಿವ ಸಿ.ಟಿ. ರವಿ

ಚಿಕ್ಕಮಗಳೂರು: ರಾಜ್ಯದ ಪ್ರತಿ ಜಿಲ್ಲೆಗಳಲ್ಲಿರುವ ಐತಿಹಾಸಿಕ ಪುರಾತನ ಸ್ಮಾರಕಗಳ ರಕ್ಷಣೆ ಉದ್ದೇಶದಿಂದ ಸರ್ಕಾರವು ಸಂರಕ್ಷಣಾ ಯೋಜನೆ ಜಾರಿಗೊಳಿಸಲಾಗಿದ್ದು, ಈ ನಿಟ್ಟಿನಲ್ಲಿ ಇಲಾಖೆಯ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಚಿವ ಸಿ.ಟಿ. ರವಿ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಆವರಣದ ಕೆಸ್ವಾನ್‍ನಲ್ಲಿ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕತಿ ಇಲಾಖೆ ಮತ್ತು ಕ್ರೀಡಾ ಇಲಾಖೆಗಳಲ್ಲಿನ ಅಭಿವೃದ್ಧಿಯ ಪ್ರಗತಿ ಪರಿಶೀಲನೆ ಕುರಿತು ವಿಡಿಯೋ ಸಂವಾದದಲ್ಲಿ ಮಾತನಾಡಿದರು.
ರಾಜ್ಯದ ಪುರಾತನ ಐತಿಹಾಸಿಕ ದೇವಾಲಯಗಳು, ಸ್ಮಾರಕಗಳು ಸೇರಿದಂತೆ ಹಲವು ವೈಶಿಷ್ಟ್ಯ ಸ್ಥಳಗಳನ್ನು ಗುರುತಿಸಿ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಪುರಾತತ್ವ ಇಲಾಖೆ ಹಾಗೂ ಧರ್ಮಸ್ಥಳ ಧರ್ಮೋತ್ತಾನ ಟ್ರಸ್ಟ್ ಸಹಯೋಗದಲ್ಲಿ ಅವುಗಳ ಜೀರ್ಣೋದ್ಧಾರ ಕೈಗೊಳ್ಳಲಾಗುವುದು, ಪ್ರತಿ ಜಿಲ್ಲೆಗಳಲ್ಲಿ ಪುರಾತತ್ವ ಇಲಾಖೆಯ ದಾಖಲೆಗಳ ಪಟ್ಟಿಯಲ್ಲಿ ಇರದ ಐತಿಹಾಸಿಕ ಸ್ಥಳಗಳನ್ನು ಗುರುತಿಸಿ ಸಂರಕ್ಷಣೆ ಮಾಡಲು ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಕ್ರಮವಹಿಸುವಂತೆ ತಿಳಿಸಿದರು.
ರಾಜ್ಯದಲ್ಲಿ ವಿಶ್ವಪಾರಂಪರಿಕ ತಾಣಗಳ ರಕ್ಷಣೆ ನಮ್ಮ ಜವಾಬ್ದಾರಿಯಾಗಿದ್ದು, ಬಾದಾಮಿ, ಹಂಪಿ, ಪಟ್ಟದಕಲ್ಲು ಸೇರಿದಂತೆ ವಿವಿಧ ತಾಣಗಳ ಸಂರಕ್ಷಣೆಗೆ ಹೆಚ್ಚು ಆದ್ಯತೆ ನೀಡಬೇಕು ಇದರ ಅಭಿವೃದ್ಧಿಗೆ ಜಿಲ್ಲಾ ಮಟ್ಟದಲ್ಲಿ ಪಾಸ್ಕ್‍ಪೋರ್ಸ್ ಸಮಿತಿ ರಚಿಸಬೇಕು. ಪ್ರವಾಸೋದ್ಯಮವನ್ನು ಮತ್ತಷ್ಟು ವಿಸ್ತಾರಗೊಳಿಸುವ ನಿಟ್ಟಿನಲ್ಲಿ ಎಲ್ಲಾ ಜಿಲ್ಲೆಗಳ ವೆಬ್‍ಸೈಟ್ ಪುಟಗಳಲ್ಲಿ ಪ್ರವಾಸಿ ಸ್ಥಳಗಳ ಬಗ್ಗೆ ಮಾಹಿತಿ ದಾಖಲಿಸಬೇಕು ಇದರಿಂದಾಗಿ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು ಸಾಧ್ಯವಾಗಲಿದೆ, ಕರಾವಳಿ ಪ್ರದೇಶಗಳಲ್ಲಿ ಬೀಚ್‍ಗಳ ಅಭಿವೃದ್ಧಿಗೆ ಯೋಜನೆ ರೂಪಿಸಬೇಕು ಮತ್ತು ಕಾಮಗಾರಿಗಳ ಜಾಗದ ವಿಷಯದಲ್ಲಿ ವಿವಿಧ ಇಲಾಖೆಗಳ ನಡುವೆ ಸಮಸ್ಯೆಗಳಿದ್ದಲ್ಲಿ ಜಂಟಿ ಸಭೆ ನಡೆಸಿ ಪರಿಹರಿಸುವಂತೆ ತಿಳಿಸಿದರು.
ರಾಜ್ಯದ 79 ತಾಲ್ಲೂಕು ಕೇಂದ್ರಗಳಲ್ಲಿ ಕ್ರೀಡಾಂಗಣಗಳ ಸಮಸ್ಯೆಗಳಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳು ಕ್ರೀಡಾಂಗಣಕ್ಕೆ ಜಾಗವನ್ನು ಗುರುತಿಸಬೇಕು, ಮೀಸಲಿಟ್ಟ ಕ್ರೀಡಾಂಗಣ ಜಾಗವು ಅಕ್ರಮವಾಗಿ ಒತ್ತುವರಿಯಾಗಿದ್ದಲ್ಲಿ ಸೂಕ್ತ ಕ್ರಮವಹಿಸುವಂತೆ ತಿಳಿಸಿದ ಅವರು ಖೇಲ್ ಇಂಡಿಯಾ ಅಡಿ ಸುಸಜ್ಜಿತ ಕ್ರೀಡಾ ಗ್ರಾಮ ನಿರ್ಮಾಣಕ್ಕೆ ಅಂದಾಜು 50 ರಿಂದ 60 ಎಕರೆ ಜಾಗದ ಅವಶ್ಯಕವಿದ್ದು ಜಾಗ ಗುರುತಿಸಿದ್ದಲ್ಲಿ ನಿರ್ಮಾಣಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.
ರಾಜ್ಯದ 7 ಜಿಲ್ಲೆಗಳಲ್ಲಿ ಜಿಲ್ಲಾ ರಂಗಮಂದಿರಗಳ ನಿರ್ಮಾಣಕ್ಕೆ ಸೂಕ್ತ ಜಾಗ ಸಮಸ್ಯೆಗಳಿದ್ದು ಈ ಬಗ್ಗೆ ಅಧಿಕಾರಿಗಳು ಕ್ರಮ ವಹಿಸುವಂತೆ ತಿಳಿಸಿದ ಅವರು ಅಪೂರ್ಣ ಗೊಂಡಿರುವ ರಂಗ ಮಂದಿರ ಪೂರ್ಣಗೊಳಿಸಿಲು ಅನುದಾನ ಬಿಡುಗಡೆಗೊಳಿಸಲಾಗಿದ್ದು, ಕಾಮಗಾರಿಗಳು ಪೂರ್ಣಗೊಳಿಸುವಂತೆ ಸೂಚಿಸಿದರು ಹಾಗೂ ಹಾವೇರಿಯಲ್ಲಿ ಸಂತ ಶಿಶುನಾಳ ಶರೀಫರ ಜನ್ಮ ಸ್ಥಳ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಸಿದ್ದಲ್ಲಿ ಅನುಮೋದನೆ ದೊರಕಿಸಿಕೊಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಹಾಯ ನಿರ್ದೇಶಕ ಡಾ. ರಮೇಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ ಹುಲ್ಲಹಳ್ಳಿ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಟಿ.ವಿ.ಎಲ್.ಎನ್ ರಾಜು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ನಾಳೆ ರೆಬಲ್‍ಸ್ಟಾರ್ ಅಂಬರೀಶ್ ಕಂಚಿನ ಪ್ರತಿಮೆ ಅನಾವರಣ

ಹೊಸ ದಿಗಂತ ವರದಿ, ಮಂಡ್ಯ: ರೆಬಲ್‍ಸ್ಟಾರ್ ಅಂಬರೀಶ್ ಅವರ ಅಭಿಮಾನಿಗಳು ಮದ್ದೂರು ತಾಲೂಕು ಹೊಟ್ಟೇಗೌಡನದೊಡ್ಡಿ ಗ್ರಾಮದಲ್ಲಿ ಅಂಬರೀಶ್ ಗುಡಿ ನಿರ್ಮಿಸಿ, ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಿದ್ದಾರೆ. ಸಂಸದೆ ಸುಮಲತಾ ಅಂಬರೀಶ್ ಅವರು ನಾಳೆ ಪ್ರತಿಮೆ ಅನಾವರಣ...

Don't Miss

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...
error: Content is protected !!