Wednesday, July 6, 2022

Latest Posts

ಐತಿಹಾಸಿಕ ‘ಮೈಸೂರು ದಸರಾ ಜಂಬೂಸವಾರಿ’ ಆರಂಭ

ಮಂಗಳೂರು: ಮೈಸೂರು ಅರಮನೆ ಆವರಣದಲ್ಲಿ ದಸರಾ ಮೆರವಣಿಗೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದರು.
ನಂದಿಧ್ವಜಕ್ಕೆ ಶುಭ ಮಕರ ಲಗ್ನದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪೂಜೆ ಸಲ್ಲಿಸಿ ಬಳಿಕ ದಸರಾ ಮೆರವಣಿಗೆಗೆ ಚಾಲನೆ ನೀಡಿದರು. ಬಳಿಕ ಅಭಿಮನ್ಯು ಹೊತ್ತಿದ್ದಂತ ಅಂಬಾರಿಯಲ್ಲಿನ ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದರು.
ಕೊರೋನಾ ಹಿನ್ನೆಲೆ ಮೈಸೂರು ದಸರಾ -2020 ಸರಳವಾಗಿ ಆಚರಿಸಲಾಗುತ್ತಿದ್ದು, ಮಧ್ಯಾಹ್ನ 2.59ರಿಂದ 3.20ರ ಅವಧಿಯಲ್ಲಿ ನಂದಿಧ್ವಜಕ್ಕೆ ಶುಭ ಮಕರ ಲಗ್ನದಲ್ಲಿ ಅರಮನೆ ಬಲರಾಮ ದ್ವಾರದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಪೂಜೆ ಸಲ್ಲಿಸಿದರು.
ಅಭಿಮನ್ಯುವಿನ ಮೇಲೆ ಚಾಮುಂಡೇಶ್ವರಿ ವಿರಾಜಮಾನವಾಗಿ ಕಂಗೊಳಿಸುತ್ತಿತ್ತು. ಇದೇ ಮೊದಲ ಬಾರಿಗೆ ಅಭಿಮನ್ಯು ಚಿನ್ನದ ಅಂಬಾರಿ ಹೊತ್ತು ಸಾಗುತ್ತಿರುವನು. ಚಿನ್ನದ ಅಂಬಾರಿ ಹೊತ್ತು ರಾಜಗಾಂಬೀರ್ಯದಲ್ಲಿ ವೇದಿಕೆಯತ್ತ ದಸರಾ ಗಜಪಡೆ ತೆರಳಿತು.
ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ಸಾಗಿದ ಜಂಬೂ ಸವಾರಿಯ ಸರಳ ಮೆರವಣಿಗೆ, ಕೇವಲ 30 ರಿಂದ 40 ನಿಮಿಷಗಳಲ್ಲಿಯೇ ಮುಕ್ತಾಯಗೊಳ್ಳಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss