ಮೈಸೂರು: ತಾಯಿಯ ಗರ್ಭದಲ್ಲಿದ್ದ ಐದು ತಿಂಗಳ ಭ್ರೂಣ ಚರಂಡಿಯಲ್ಲಿ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಚಾಮಲಾಪುರದಲ್ಲಿ ಮಂಗಳವಾರ ನಡೆದಿದೆ.
ಯಾವುದೋ ಮಹಿಳೆಗೆ ಗರ್ಭಪಾತವಾಗಿದ್ದು, ಆ ಐದು ತಿಂಗಳ ಭ್ರೂಣವನ್ನು ಚರಂಡಿಗೆ ಎಸೆಯಲಾಗಿದೆ. ಚರಂಡಿಯಲ್ಲಿ ಮಗುವಿನ ಭ್ರೂಣ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.
ಮಗು ಯಾರದ್ದು, ಗರ್ಭಪಾತ ಆಗಿದ್ದು ಹೇಗೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಇನ್ನು ಭ್ರೂಣದ ದಾರುಣ ಸ್ಥಿತಿ ಕಂಡು ಸ್ಥಳೀಯರು ಮರುಗಿದ ದೃಶ್ಯ ಕಂಡು ಬಂತು.