Wednesday, August 17, 2022

Latest Posts

ಐವನ್ ಡಿಸೋಜಗೆ ಕೊರೋನಾ ಪಾಸಿಟಿವ್: ಸ್ವಯಂ ಕ್ವಾರಂಟೈನ್‌ಗೆ ಒಳಗಾದ ಶಾಸಕ ಯು.ಟಿ. ಖಾದರ್

ಮಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಅವರಿಗೆ ಶನಿವಾರ ಕೊರೋನಾ ಪಾಸಿಟಿವ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಶಾಸಕ ಯು.ಟಿ. ಖಾದರ್ ಸ್ವಯಂ ಆಗಿ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಯು.ಟಿ. ಖಾದರ್, ‘ಮಾಜಿ ಶಾಸಕ ಐವನ್ ಡಿಸೋಜ ಹಾಗೂ ಲಕ್ಷಾಂತರ ಮಂದಿ ಕೋವಿಡ್ ಸೋಂಕಿತರಾಗಿರಾಗಿದ್ದಾರೆ. ಇವರೆಲ್ಲರೂ ಶೀಘ್ರದಲ್ಲೇ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಕೆಲ ದಿನಗಳಿಂದ ಐವನ್ ಡಿಸೋಜ ಅವರ ಜತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಕಾರಣ ನಾನು ಕೆಲವು ದಿನಗಳ ಕಾಲ ಸ್ವಯಂ ನಿರ್ಬಂಧ ಹಾಕಿಕೊಂಡಿದ್ದೇನೆ’ ಎಂದು ಹೇಳಿದ್ದಾರೆ.
‘ಹೀಗಾಗಿ ಇಂದು ನಿಗದಿಯಾಗಿದ್ದ ಜನ ಸಮಾನ್ಯರ ಭೇಟಿ, ಕ್ಷೇತ್ರದ ಅಭಿವೃದ್ದಿ ಬಗ್ಗೆ ಜಿಲ್ಲಾಧಿಕಾರಿ ಜತೆಗಿನ ಸಭೆ, ಕ್ಷೇತ್ರದಲ್ಲಿ ನಿಗದಿಯಾಗಿದ್ದ ವಿವಿಧ ಕಾರ್ಯಕ್ರಮಗಳು ಮುಂದೂಡಲ್ಪಟ್ಟಿದ್ದೆ. ಜನ ಸಾಮಾನ್ಯರ ಸೇವೆಗೆ ದೂರವಾಣಿ ಮೂಲಕ ಲಭ್ಯವಿದ್ದು ಅಗತ್ಯವಿದ್ದಲ್ಲಿ ನೇರವಾಗಿ ದೂರವಾಣಿ ಮೂಲಕ ನನ್ನನ್ನ ಎಂದಿನಂತೆ ಸಂಪರ್ಕಿಸಬಹುದಾಗಿದೆ’  ಎಂದು ಟ್ವಿಟ್ಟರ್‌ನಲ್ಲಿ ಹೇಳಿಕೊಂಡಿದ್ದಾರೆ.
‘ಇದೇ ವೇಳೆ ಐವನ್ ಡಿಸೋಜ ಜತೆಗೆ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಕೆಮ್ಮು ಜ್ವರ ಮುಂತಾದ ಲಕ್ಷಣ ಕಂಡು ಬಂದಲ್ಲಿ ತಕ್ಷಣ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡುತ್ತೇನೆ’ ಎಂದು ಯು.ಟಿ. ಖಾದರ್ ಹೇಳಿದ್ದಾರೆ.
ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ಬಹುತೇಕ ಕಾರ್ಯಕ್ರಮಗಳಲ್ಲಿ ಐವನ್ ಡಿಸೋಜ ಭಾಗವಹಿಸಿದ್ದರು. ಡಿಕೆಶಿ ಮತ್ತು ಜತೆಗಿದ್ದ ಮಾಜಿ ಸಚಿವರಾದ ರಮಾನಾಥ ರೈ, ಅಭಯ ಚಂದ್ರ ಜೈನ್ ಸಹಿತ ಕಾಂಗ್ರೆಸ್ ಮುಖಂಡರು ಕ್ವಾರಂಟೈನ್ ಆಗುವ ಬಗ್ಗೆ ಇದುವರೆಗೆ ಅಧಿಕೃತವಾಗಿ ತಿಳಿಸಿಲ್ಲ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!