Sunday, June 26, 2022

Latest Posts

ಒಂದು ಸಾವಿರ ಜನಕ್ಕೆ ಸೀಮಿತಗೊಳಿಸಿ ತಲಕಾಡು ಪಂಚಲಿಂಗ ದರ್ಶನ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಹೊಸ ದಿಗಂತ ವರದಿ, ಮೈಸೂರು:

ಒಂದು ಸಾವಿರ ಜನಕ್ಕೆ ಸೀಮಿತಗೊಳಿಸಿ, ಸರಳವಾಗಿ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ತಲಕಾಡು ಪಂಚಲಿoಗ ದರ್ಶನ ಮಹೋತ್ಸವ ನಡೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬುಧವಾರ ನಡೆದ ಪಂಚಲಿoಗ ದರ್ಶನ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ತಿ.ನರಸೀಪುರ ಪ್ರವಾಸಿ ಮಂದಿರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ತಲಕಾಡು ಪಂಚಲಿoಗ ದರ್ಶನದ ಹಿನ್ನೆಲೆ ಅಗತ್ಯವಿರುವ ಕೆಲಸಗಳನ್ನು ಈಗ ತುರ್ತಾಗಿ ಕೈಗೊಳ್ಳಬೇಕು. ತಲಕಾಡು ಅಭಿವೃದ್ಧಿಗೆ ಬೇಕಾಗುವ ಶಾಶ್ವತ ಕೆಲಸಗಳನ್ನು ನಂತರ ಕೈಗೆತ್ತುಕೊಳ್ಳಿ. ಈಗ ತಯಾತುರಿಯಲ್ಲಿ ಮಾಡುವುದು ಬೇಡ ಎಂದು ಹೇಳಿದರು.
ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಮಾತನಾಡಿ, ರಸ್ತೆ ಗುಂಡಿ ಮುಚ್ಚುವ ಕೆಲಸ ನಾಳೆಯಿಂದಲೇ ಕೈಗೊಳ್ಳಲಾಗುತ್ತದೆ. ಈ ಕೆಲಸವನ್ನು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ತ್ವರಿತಗತಿಯಲ್ಲಿ ಪೂರ್ಣಗೊಳಿಸಲಿದ್ದಾರೆ ಎಂದು ತಿಳಿಸಿದರು.
ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ , ಪಂಚಲಿoಗ ದರ್ಶನ ಮಹೋತ್ಸವಕ್ಕೆ 2.2 ಕೋಟಿ ಅಂದಾಜು ವೆಚ್ಚದ ಪ್ರಸ್ತಾವನೆಯನ್ನು ಜಿಲ್ಲಾಡಳಿತ ಸರ್ಕಾರಕ್ಕೆ ಸಲ್ಲಿಸಿದೆ. ಈ ವೆಚ್ಚ ಮರುಪರಿಶೀಲಿಸಿ ಸಲ್ಲಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಸಲಹೆ ನೀಡಿದರು.
ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಎಸ್.ಎ.ರಾಮದಾಸ್, ಎಂ.ಅಶ್ವಿನ್ ಕುಮಾರ್, ಜಿಪಂ ಅಧ್ಯಕ್ಷೆ ಪರಿಮಳಾ ಶ್ಯಾಂ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ. ರಿಷ್ಯಂತ್, ಜಿ.ಪಂ. ಸಿಇಒ ಡಿ.ಭಾರತಿ, ಪ್ರಾದೇಶಿಕ ಆಯುಕ್ತ ಪ್ರಕಾಶ್ ಇನ್ನಿತರರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss