ಒಂದು ಹಂತದ ಪರೀಕ್ಷೆ ಮಾತ್ರ ನಿಮ್ಮ ಜೀವನ ನಿರ್ಧರಿಸುವುದಿಲ್ಲ, ಆಸಕ್ತಿ ಕ್ಷೇತ್ರಗಳಲ್ಲಿ ಪ್ರತಿಭೆ ಬಳಸಿಕೊಳ್ಳಿ: ಮೋದಿ ಕಿವಿಮಾತು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ 12ನೇ ತರಗತಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಶುಕ್ರವಾರ ಪ್ರಕಟವಾಗಿದ್ದು, ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಪರೀಕ್ಷಾ ಯೋಧರು ಎಂದು ವಿದ್ಯಾರ್ಥಿಗಳನ್ನು ಕರೆದಿರುವ ಪ್ರಧಾನ ಮಂತ್ರಿ , 12ನೇ ತರಗತಿ ಸಿಬಿಎಸ್ ಇ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದವರಿಗೆ ಧನ್ಯವಾದಗಳು. ಯುವ ಪ್ರತಿಭಾವಂತರ ಕಠಿಣ ಶ್ರಮ ಮತ್ತು ನಿಷ್ಠೆ ಕಂಡರೆ ಹೆಮ್ಮೆಯಾಗುತ್ತದೆ. ಯಶಸ್ವಿ ಯುವಶಕ್ತಿನ್ನು ಬೆಳೆಸಿ ಪೋಷಿಸುವಲ್ಲಿ ಪೋಷಕರು ಮತ್ತು ಶಿಕ್ಷಕರ ಪಾತ್ರ ಮುಖ್ಯವಾಗಿದೆ ಎಂದಿದ್ದಾರೆ. ಪರೀಕ್ಷೆಯಲ್ಲಿ ಇನ್ನಷ್ಟು ಉತ್ತಮ ಅಂಕ ಗಳಿಸಬಹುದಾಗಿತ್ತು ಮತ್ತು ಗಳಿಸಿದ ಅಂಕ ಸಾಕಾಗಲಿಲ್ಲ ಎಂದು ಬೇಸರಪಟ್ಟುಕೊಳ್ಳುವ ಯುವ ವಿದ್ಯಾರ್ಥಿಗಳಿಗೆ ನಾನು ಹೇಳಲು ಬಯಸುವುದೆಂದರೆ ಮುಂದಿನ ಸಮಯಗಳಲ್ಲಿ ನಿಮಗೆ ಸಾಕಷ್ಟು ಅವಕಾಶಗಳ ಬಾಗಿಲು ತೆರೆದಿರುತ್ತದೆ.

ಒಂದು ಹಂತದ ಪರೀಕ್ಷೆ ಮಾತ್ರ ನಿಮ್ಮ ಜೀವನವನ್ನು ನಿರ್ಧರಿಸುವುದಿಲ್ಲ. ನೀವು ಆಸಕ್ತಿ ಹೊಂದಿರುವ ಕ್ಷೇತ್ರಗಳಲ್ಲಿ ನಿಮ್ಮ ಪ್ರತಿಭೆಯನ್ನು ಬಳಸಿಕೊಳ್ಳಿ. ಆಗ ನೀವು ಹೆಚ್ಚು ಪ್ರಕಾಶಮಾನರಾಗುತ್ತೀರಿ ಎಂದು ಕಿವಿಮಾತು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!