Thursday, July 7, 2022

Latest Posts

ನಾನು ರೈತನ ಮಗ, ರೈತರ ಹಿತಾಸಕ್ತಿಗೆ ಧಕ್ಕೆ ಬರುವಂತಹ ಯಾವುದೇ ಕೆಲಸ ಸರ್ಕಾರ ಮಾಡುವುದಿಲ್ಲ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೇಂದ್ರ ಸರಕಾರ ಜಾರಿಗೆ ತಂದ ನೂತನ ಕೃಷಿ ಕಾಯ್ದೆಗಳನ್ನು ಮುಂದಿನ ಒಂದೆರಡು ವರ್ಷಗಳ ಕಾಲ ಜಾರಿ ಆಗಲು ಬಿಡಿ. ಆ ಬಳಿಕ ಅವುಗಳಿಂದ ರೈತರಿಗೆ ಏನೇನು ಲಾಭದಾಯಕವಲ್ಲ, ಪ್ರಯೋಜನವಲ್ಲ ಎಂದಾದರೆ ಅಗತ್ಯ ತಿದ್ದುಪಡಿಗಳನ್ನು ಮಾಡೋಣ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ರೈತರಲ್ಲಿ ಮನವಿ ಮಾಡಿದ್ದಾರೆ.
ಬಿಜೆಪಿ ಸರ್ಕಾರದ ಯೋಜನೆಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ದೆಹಲಿಯಲ್ಲಿ ಆಯೋಜಿಸಲಾಗಿದ್ದ ಱಲಿಯಲ್ಲಿ ಮಾತನಾಡಿದ ಅವರು,ಸ್ವತಃ ತಾನೂ ರೈತರ ಮಗನಾಗಿದ್ದು, ರೈತರ ಹಿತಾಸಕ್ತಿಗೆ ಧಕ್ಕೆಬರುವಂತಹ ಯಾವುದೇ ಕೆಲಸವನ್ನು ಮೋದಿ ಸರ್ಕಾರ ಮಾಡುವುದಿಲ್ಲ ಎಂದು ಭರವಸೆ ನೀಡಿದರು.
ಎಲ್ಲಾ ಸಮಸ್ಯೆಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬಹುದು. ರೈತರೊಂದಿಗೆ ಪ್ರಧಾನಿ ಮೋದಿ ಮಾತುಕತೆ ನಡೆಸಲು ಸಿದ್ಧರಿದ್ದಾರೆ. ಪ್ರತಿಭಟನೆ ನಡೆಸುತ್ತಿರೋ ಎಲ್ಲಾ ರೈತರ ಬಳಿ ಮನವಿ ಮಾಡಿಕೊಳ್ಳುತ್ತಿದ್ದು, ಕೃಷಿ ಕಾಯ್ದೆಗಳ ಕುರಿತಂತೆ ಮಾತುಕತೆ ಬನ್ನಿ. ಈಗ ಪ್ರತಿಭಟನೆ ನಡೆಸುತ್ತಿರುವವರು ಕೃಷಿ ಕುಟುಂಬದಲ್ಲಿ ಜನಿಸಿದ್ದು, ಅವರ ಬಗ್ಗೆ ನಮ್ಗೆ ಅಪಾರ ಗೌರವವಿದೆ. ಮಾತುಕತೆ ಮೂಲಕ ಎಲ್ಲ ಸಮಸ್ಯೆಗಳನ್ನು ಬಗೆಹರಿಸಬಹುದು ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss