ವಾಷಿಂಗ್ಟನ್: ವಿಶ್ವದಲ್ಲಿ ಕೊರೋನಾ ರಣಕೇಕೆ ಹಾಕುತ್ತಿದೆ. ಇದು ನಿಯಂತ್ರಣಕ್ಕೆ ಬರುವ ಸೂಚನೆಯೇ ಸಿಗುತ್ತಿಲ್ಲ. ಇದೀಗ ಕಳೆದ 24 ಗಂಟೆಗಳಲ್ಲಿ 1 ಲಕ್ಷದ 83 ಸಾವಿರ ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಜಾಗತಿಕವಾಗಿ ಒಟ್ಟಾರೆ ಸೋಂಕಿತರ ಸಂಖ್ಯೆ 9,046,215ಕ್ಕೆ ಏರಿಕೆಯಾಗಿದೆ. ಬ್ರೆಜಿಲ್ ದೇಶವೊಂದರಲ್ಲೇ 54,771 ಹೊಸ ಪ್ರಕರಣಗಳು ದಾಖಲಾಗಿದ್ದು, ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ 36,617 ಪ್ರಕರಣಗಳು ದಾಖಲಾಗಿವೆ. ಇನ್ನು ಭಾರತದಲ್ಲಿ ನಿನ್ನೆ ಒಂದೇ ದಿನ ಗರಿಷ್ಠ 15,400 ಹೊಸ ಪ್ರಕರಣಗಳು ದಾಖಲಾಗಿವೆ.
ಇನ್ನು ಜಗತ್ತಿನಾದ್ಯಂತ ಒಟ್ಟಾರೆ 9,046,215 ಸೋಂಕಿತರ ಪೈಕಿ, 4,838,359 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. 470,703ಮಂದಿ ಸೋಂಕಿತರು ಕೊರೋನಾ ವೈರಸ್ ಗೆ ಸಾವನ್ನಪ್ಪಿದ್ದಾರೆ.