Monday, August 8, 2022

Latest Posts

ಒಂದೇ ವಾರದಲ್ಲಿ ಮೂವರು ಜನಪ್ರತಿನಿಧಿಗಳನ್ನು ಬಲಿಪಡೆದ ಕೊರೋನಾ ವೈರಸ್

ಬೆಂಗಳೂರು: ದೇಶದೆಲ್ಲೆಡೆ ಕೊರೋನಾ ದಿನೇ ದಿನೇ ವ್ಯಾಪಕವಾಗಿ ಹರಡುತ್ತಿದೆ . ಕೊರೋನಾ ಸೋಂಕಿಗೆ ನಿತ್ಯವೂ ನೂರಾರು ಜನರು ಬಲಿಯಾಗುತ್ತಿದ್ದಾರೆ.
ಇನ್ನು ಕೊರೋನಾಗೆ ಜನಪ್ರತಿನಿಧಿಗಳು ಬಲಿಯಾಗುತ್ತಿದ್ದು, ರಾಜ್ಯದಲ್ಲಿ ಕಳೆದ ಒಂದೇ ವಾರದಲ್ಲಿ ಮೂವರು ಜನಪ್ರತಿನಿಧಿಗಳು ಕೊರೋನಾಗೆ ಬಲಿಯಾಗಿದ್ದಾರೆ.
ಇತ್ತೀಚೆಗೆ ಬಿಜೆಪಿಯಿಂದ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದ ಅಶೋಕ್ ಗಸ್ತಿಯವರು ಕೊರೋನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದರು. ಅವರ ಸಾವು ಇನ್ನೂ ಮಾಸುವ ಮುನ್ನವೇ ನಿನ್ನೆಯಷ್ಟೇ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಕೊರೋನಾ ಸೋಂಕಿನಿಂದಾಗಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.
ಈ ಸರಣಿ ಇಂದು ಕೂಡ ಮುಂದುವರೆದಿದ್ದು, ಕೊರೋನಾ ಸೋಂಕಿನಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂ ಕಾಂಗ್ರೆಸ್ ಶಾಸಕ ನಾರಾಯಣ ರಾವ್ಚಿ ಕಿತ್ಸೆ ಫಲಕಾರಿಯಾಗದೇ ಕಿಲ್ಲರ್ ಕೊರೋನಾಗೆ ಬಲಿಯಾಗಿದ್ದಾರೆ.
ಈ ಮೂಲಕ ರಾಜ್ಯದಲ್ಲಿ ಒಂದೇ ವಾರದಲ್ಲಿ ಮೂವರು ಜನಪ್ರತಿನಿಧಿಗಳ ನಿಧನ ಚಿಂತೆಗೀಡಾಗಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss