ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಒಕ್ಕಲಿಗ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಈ ಅಬಿವೃದ್ಧಿ ನಿಗಮವನ್ನು ಸ್ಥಾಪಿಸಲಾಗಿದೆ ಎಂದು ಸರ್ಕಾರದ ಅಧಿಕೃತ ಪ್ರಕಟನೆ ತಿಳಿಸಿದೆ.
ಒಟ್ಟು 500 ಕೋಟಿ ರೂಪಾಯಿಗಳನ್ನು ನಿಗಮದ ಚಟುವಟಿಕೆಗಳಿಗಾಗಿ ಮೀಸಲಿಡುವುದಾಗಿ ತಿಳಿಸಲಾಗಿದೆ. ಕಳೆದ ಬಜೆಟ್ನಲ್ಲಿಯೇ ಒಕ್ಕಲಿಗ ಅಭಿವೃದ್ಧಿ ನಿಗಮದ ಸ್ಥಾಪನೆ ಕುರಿತು ಪ್ರಸ್ತಾವನೆ ಮಾಡಲಾಗಿತ್ತು. ಆ ಪ್ರಸ್ತಾವನೆಯಂತೆಯೇ ರಾಜ್ಯ ಸರ್ಕಾರ ಇದೀಗ ಅಧಿಕೃತ ಆದೇಶ ಪ್ರಕಟಿಸಿದೆ.
ಒಕ್ಕಲಿಗ ಸಮುದಾಯದ ಹಿಂದುಳಿದ ವರ್ಗಗಳ ಮಿಸಲಾತಿ ಪಟ್ಟಿಯ ಪ್ರವರ್ಗ 3ಎನಲ್ಲಿಯ ಕ್ರಮ ಸಂಖ್ಯೆ 1ರ ಎಯಿಂದ ಟಿ ವರೆಗೆ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ನಾಮಧಾರ್ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ಗಂಗಡ್ಕಾರ್ ಒಕ್ಕಲಿಗ ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ ಗೌಡ,(GOUDA) / ( GOWDA), ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ರಡ್ಡಿ, ಗೌಂಡರ್, ನಾಮಧಾರಿ ಗೌಡ, ಉಪ್ಪಿನ ಕೊಳಗ/ ಉತ್ತಮ ಕೊಳಗ ಜಾತಿಗಳಿಗೆ ಒಕ್ಕಲಿಗ ಅಭಿವೃದ್ಧಿ ನಿಗಮ ಶ್ರಮಿಸಲಿದೆ.