ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಟಕ್‌ನಲ್ಲಿ ದುರ್ಗಾ ಪೂಜೆಯ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಹಿಂಸಾಚಾರದ ಬಳಿಕ ಭಾನುವಾರದಿಂದ 36 ಗಂಟೆಗಳ ಕಾಲ ಕರ್ಫ್ಯೂ ವಿಧಿಸಲಾಗಿದೆ.
ಭಾನುವಾರ ರಾತ್ರಿ 10 ಗಂಟೆಯಿಂದ 13 ಪೊಲೀಸ್ ಠಾಣೆ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿಯಲ್ಲಿದೆ. ಸಂಜೆ 7 ಗಂಟೆಯಿಂದ ಇಂಟರ್ನೆಟ್ ಸೇವೆಗಳನ್ನು ಸಹ ಸ್ಥಗಿತಗೊಳಿಸಲಾಗಿದೆ. ಸಿಎಂಸಿ, ಸಿಡಿಎ ಮತ್ತು ಬಯಾಲಿಶ್ ಮೌಜಾ ಪ್ರದೇಶಗಳಲ್ಲಿ ನಿರ್ಬಂಧಗಳು ಜಾರಿಯಲ್ಲಿವೆ. ಶಾಂತಿ ಕಾಪಾಡುವಂತೆ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಜನರಲ್ಲಿ ಮನವಿ ಮಾಡಿದ್ದಾರೆ.
ವಾಟ್ಸಾಪ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಸ್ನ್ಯಾಪ್‌ಚಾಟ್ ಮತ್ತು ಎಕ್ಸ್ ಸೇರಿದಂತೆ ಎಲ್ಲಾ ಅಂತರ್ಜಾಲ ಮಾಧ್ಯಮ ನಿರ್ಬಂಧಿಸಲಾಗಿದೆ. ರಾತ್ರಿಯಾಗುತ್ತಿದ್ದಂತೆ, ಸೋಮವಾರ ಬೆಳಗ್ಗೆಯಿಂದ ಕಟಕ್‌ನ ವಿವಿಧ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಕರ್ಫ್ಯೂ ವಿಧಿಸಲಾಯಿತು.
ಪೊಲೀಸರು ನಿರಂತರವಾಗಿ ಬೀದಿಗಳಲ್ಲಿ ಗಸ್ತು ತಿರುಗುತ್ತಿದ್ದಾರೆ. ಇಂಟರ್ನೆಟ್ ಸೇವಾ ಪೂರೈಕೆದಾರರು ಮತ್ತು ಬ್ರಾಡ್‌ಬ್ಯಾಂಡ್ ಸೇವೆಗಳನ್ನು ಸಹ ನಿರ್ಬಂಧಿಸಲಾಗಿದೆ. ಅಹಿತಕರ ಪರಿಸ್ಥಿತಿಯನ್ನು ಸೃಷ್ಟಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಎಸ್. ದೇವದತ್ ಸಿಂಗ್ ಹೇಳಿದ್ದಾರೆ.
ಕಟಕ್‌ನಲ್ಲಿ ಹಿಂಸಾಚಾರ: 36 ಗಂಟೆಗಳ ಕಾಲ ಇಂಟರ್ನೆಟ್ ಸ್ಥಗಿತ
