Sunday, August 14, 2022

Latest Posts

ಕಟೀಲು ಶ್ರೀದುರ್ಗಾಪರಮೇಶ್ವರೀ ದೇಗುಲದ 17 ಸಿಬ್ಬಂದಿಗಳಿಗೆ ಕೊರೋನಾ ಪಾಸಿಟಿವ್

ಮೂಲ್ಕಿ: ಪ್ರಸಿದ್ಧ ಕ್ಷೇತ್ರವಾಗಿರುವ ಕಟೀಲು ಶ್ರೀದುರ್ಗಾಪರಮೇಶ್ವರೀ ದೇಗುಲದ ೧೭ ಸಿಬ್ಬಂದಿಗಳಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.
ಕೊರೋನಾ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಕೆಲವು ತಿಂಗಳುಗಳ ಕಾಲ ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಿರಾಕರಿಸಲಾಗಿತ್ತು. ಕೆಲವು ದಿನಗಳ ಹಿಂದೆಯಷ್ಟೇ ಭಕ್ತರಿಗೆ ದೇಗುಲ ಪ್ರವೇಶಕ್ಕೆ ಅನುಮತಿ ನೀಡಲಾಗಿತ್ತು. ಇಲ್ಲಿ ಭಕ್ತರಿಗೆ ಭೋಜನ ಕೂಡಾ ಆರಂಭವಾಗಿತ್ತು.
ಸರಕಾರ ಆದೇಶದಂತೆ ಕೋವಿಡ್-19ರ ಎಲ್ಲಾ ನಿಯಮಗಳನ್ನು ಇಲ್ಲಿ ಪಾಲಿಸಲಾಗಿತ್ತು. ಭಕ್ತರ ನಡುವೆ ಅಂತರ, ಮಾಸ್ಕ್ ಕಡ್ಡಾಯ ಮೊದಲಾದವುಗಳನ್ನು ಇಲ್ಲಿ ಜಾರಿಗೊಳಿಸಲಾಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss