Wednesday, August 10, 2022

Latest Posts

ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಪ್ರಬಲ ಭೂಕಂಪ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಜೆ 7.32 ಕ್ಕೆ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.1 ತೀವ್ರತೆಯ ಭೂಕಂಪನ ದಾಖಲಾಗಿದೆ.
ಕತ್ರಾದ ಈಶಾನ್ಯಕ್ಕೆ 63 ಕಿಲೋಮೀಟರ್ ದೂರದಲ್ಲಿ ಭೂಕಂಪನದ ಕೇಂದ್ರ ಬಿಂದು ಕಂಡುಬಂದಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
5 ಕಿಲೋ ಮೀಟರ್ ಆಳದಲ್ಲಿ ಕಂಪನವಾಗಿದ್ದು, ಜಮ್ಮು ಮತ್ತು ಕಾಶ್ಮೀರದ ಹಲವೆಡೆ ಭೂಮಿ ನಡುಗಿದ ಅನುಭವವಾಗಿದೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ, ಯಾವುದೇ ಹಾನಿಯಾದ ವರದಿಯಾಗಿಲ್ಲ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss