Wednesday, August 10, 2022

Latest Posts

ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣನ ದರ್ಶನ ಮಾಡಿದ ಸಚಿವ ಕೆ.ಎಸ್. ಈಶ್ವರಪ್ಪ

ದಿಗಂತ ವರದಿ, ಉಡುಪಿ:

ಪಂಚಾಯತ್ ರಾಜ್ ಹಾಗೂ ಗ್ರಾಮೀಣ ಅಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಗುರುವಾರ ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದರು.  ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕಾರಣಿ ಮುಗಿಸಿ, ಉಡುಪಿಯ ಶ್ರೀಕೃಷ್ಣಮಠಕ್ಕೆ ಬಂದು ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣನ ದರ್ಶನ ಮಾಡಿದರು.
ಪರ್ಯಾಯ ಅದಮಾರು ಮಠಾಧೀಶ ಶ್ರೀಈಶಪ್ರಿಯತೀರ್ಥ ಸ್ವಾಮೀಜಿ ಅವರಿಂದ ಮಂತ್ರಾಕ್ಷತೆ ಪಡೆದು, ಕೆಲಕಾಲ ಸಮಾಲೋಚನೆ ನಡೆಸಿದರು. ಕನಕನ ಕಿಂಡಿಯ ಮೂಲಕ ಸಚಿವ ಈಶ್ವರಪ್ಪ ಅವರು ಮತ್ತೆ ಶ್ರೀಕೃಷ್ಣನ ದರ್ಶನ ಮಾಡಿದರು.
ಕುರುಬ ಸಮಾಜದ ಮುಖಂಡರು ರಥಬೀದಿಯಲ್ಲಿ ಶೀಘ್ರ ಕನಕನ ಗುಡಿ ನಿರ್ಮಾಣದ ಬಗ್ಗೆ ಮನವಿಯನ್ನು ಸಚಿವರಿಗೆ ಸಲ್ಲಿಸಿದರು. ಮನವಿ ಸ್ವೀಕರಿಸಿ ಕನಕನ ಪುತ್ಥಳಿಗೆ ಮಾಲಾರ್ಪಣೆ ನೆರವೇರಿಸಿದರು. ಆದಷ್ಟು ಬೇಗ ಸುಂದರವಾದ ಕನಕನ ಗುಡಿ ನಿರ್ಮಾಣ ಆಗಲಿದೆ. ಸ್ಥಳೀಯ ಶಾಸಕರು ಈ ಬಗ್ಗೆ ಮುತುವರ್ಜಿ ವಹಿಸಿದ್ದಾರೆ ಎಂದು ಕುರುಬ ಮುಖಂಡರಿಗೆ ಸಚಿವ ಈಶ್ವರಪ್ಪ ಭರವಸೆ ನೀಡಿದರು.
ಬಳಿಕ ಪಲಿಮಾರು ಮಠಕ್ಕೆ ಭೇಟಿ ನೀಡಿ ಪಲಿಮಾರು ಮಠಾಧೀಶ ಶ್ರೀವಿದ್ಯಾಧೀಶತೀರ್ಥ ಸ್ವಾಮೀಜಿ, ಕಿರಿಯ ಯತಿ ಶ್ರೀವಿದ್ಯಾರಾಜೇಶ್ವರತೀರ್ಥ ಸ್ವಾಮೀಜಿ, ಅದಮಾರು ಮಠಾಧೀಶ ಶ್ರೀವಿಶ್ವಪ್ರಿಯತೀರ್ಥ ಸ್ವಾಮೀಜಿ, ಕಾಣಿಯೂರು ಮಠಾಧೀಶ ಶ್ರೀವಿದ್ಯಾವಲ್ಲಭತೀರ್ಥ ಸ್ವಾಮೀಜಿ, ಸೋದೆ ಮಠಾಧೀಶ ಶ್ರೀವಿಶ್ವವಲ್ಲಭತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಸಚಿವರೊಂದಿಗೆ ಉಡುಪಿ ಶಾಸಕ ಕೆ. ರಘುಪತಿ ಭಟ್, ಉಡುಪಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಕುರುಬ ನಾಯಕರಾದ ಮೇಟಿ ಮುದಿಯಪ್ಪ ಮೊದಲಾದವರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss