Saturday, July 2, 2022

Latest Posts

‘ಕನ್ನಡಿಗ’ನಾದ ಕ್ರೇಜಿ ಸ್ಟಾರ್ ರವಿಚಂದ್ರನ್! ರಾಣಿಯಾಗಿ ಮಿಂಚಲಿದ್ದಾರೆ ಮಂಡ್ಯ ಸಂಸದೆ ಸುಮಲತಾ!

ಬೆಂಗಳೂರು :  ಕೊರೋನಾದಿಂದ  ಚಿತ್ರರಂಗ  ಕಳೆಗುಂದಿತ್ತು.  ಆದರೆ  ಈಗ  ನಿಧಾನವಾಗಿ ಮೊದಲಿನ ಸ್ಥಿತಿಗೆ ಬರುತ್ತಿದೆ.  ಈಗಾಗಲೇ  ಹಲವು ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಇದೀಗ  ಡಾ. ರವಿಚಂದ್ರನ್  ಅಭಿನಯದ ಬಿ.ಎಂ. ಗಿರಿರಾಜ್ ನಿರ್ದೇಶನದ, ಐತಿಹಾಸಿಕ ಕಥಾಹಂದರ ಹೊಂದಿರುವ ‘ಕನ್ನಡಿಗ’ ಸಿನಿಮಾ  ಸೆಟ್ಟೇರಿದೆ . ದಸರಾ ಹಬ್ಬದ ಪ್ರಯುಕ್ತ ಈ  ಸಿನಿಮಾದ ಮುಹೂರ್ತ ನೆರವೇರಿದೆ. ವಿಶೇಷವೆಂದರೆ ಶಿವರಾಜ್ ಕುಮಾರ್ ಆರಂಭ ಫಲಕ ತೋರಿಸಿದರೆ, ರಾಘವೇಂದ್ರ ರಾಜ್ ಕುಮಾರ್ ಕ್ಯಾಮೆರಾ ಸ್ವಿಚ್ ಆನ್ ಮಾಡುವ ಮೂಲಕ  ಚಿತ್ರತಂಡಕ್ಕೆ ಶುಭಕೋರಿದ್ದಾರೆ.

ಚಿತ್ರದಲ್ಲಿ 1858ರ ನಂತರದ ಕಾಲಘಟ್ಟವನ್ನು ಮರುಸೃಷ್ಟಿಸಲಾಗುತ್ತಿದೆ.  ಈ ನಾಡಿನ ಇತಿಹಾಸವನ್ನು ದಾಖಲಿಸುವಲ್ಲಿ ಲಿಪಿಕಾರರ ವಂಶದ ಕೊಡುಗೆ ಅಪಾರ. ಈ ಸಿನಿಮಾದಲ್ಲಿ ಲಿಪಿಕಾರ ಗುಣಭದ್ರನ ಪಾತ್ರದಲ್ಲಿ ರವಿಚಂದ್ರನ್ ಕಾಣಿಸಿಕೊಳ್ಳಲಿದ್ದಾರೆ. ನಾಯಕಿಯಾಗಿ ಪಾವನಾ ನಟಿಸುತ್ತಿದ್ದಾರೆ. ಸಂಕಮ್ಮಬ್ಬೆಯಾಗಿ ಸ್ವಾತಿ ಚಂದ್ರಶೇಖರ್ ನಟಿಸಿದರೆ, ಕಿಟ್ಟಲ್ ಪಾತ್ರದಲ್ಲಿ ಜೆಮಿ ವಾಲ್ಟರ್ ಕಾಣಿಸಿಕೊಳ್ಳಲಿದ್ದಾರೆ. ಕಮರೀಲ ಭಟ್ಟನಾಗಿ ಚಿ. ಗುರುದತ್, ಮಠದ ಸ್ವಾಮಿಯ ಪಾತ್ರದಲ್ಲಿ ದತ್ತಣ್ಣ, ಮಲ್ಲಿನಾಥನಾಗಿ ಬಾಲಾಜಿ ಮನೋಹರ್ ಮತ್ತು ಅಚ್ಯುತ್ ಕುಮಾರ್ ಹರಿಗೋಪಾಲನ ಪಾತ್ರ ನಿರ್ವಹಿಸುತ್ತಿದ್ದಾರೆ.

ಈ ಚಿತ್ರದಲ್ಲಿ ವಿಶೇಷವೆಂದರೆ ರಾಣಿ ಚಿನ್ನಬೈರಾದೇವಿ ಪಾತ್ರದಲ್ಲಿ ನಟಿ ಸುಮಲತಾ ಅಂಬರೀಶ್ ಕಾಣಿಸಿಕೊಳ್ಳಲಿದ್ದಾರೆ. ಜಿ.ಎಸ್.ವಿ. ಸೀತಾರಾಮ್ ಛಾಯಾಗ್ರಹಣ ಮಾಡುತ್ತಿದ್ದು, ರವಿ ಬಸ್ರೂರ್ ಸಂಗೀತ ಸಂಯೋಜನೆ ಚಿತ್ರಕ್ಕಿದೆ. ಅರ್ಜುನ್ ಕಿಟ್ಟು ಸಂಕಲನ ಮಾಡುತ್ತಿದ್ದು, ಹೊಸ್ಮನೆ ಮೂರ್ತಿ ಅವರ ಕಲಾ ನಿರ್ದೇಶನ ‘ಕನ್ನಡಿಗ’ ಚಿತ್ರಕ್ಕಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss