ದುಬೈ: ರಾಜಸ್ಥಾನ್ ವಿರುದ್ಧ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 158 ರನ್ ಕಲೆಹಾಕಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ರೈಸರ್ಸ್ಗೆ ಕನ್ನಡಿಗ ಮನೀಶ್ ಪಾಂಡೆ ಹಾಗೂ ನಾಯಕ ಡೇವಿಡ್ ವಾರ್ನರ್ ಅವರ ಉತ್ತಮ ಬ್ಯಾಟಿಂಗ್ ಪ್ರದರ್ಶನದಿಂದ 158 ರನ್ ಗಳಿಸಿದರು.
ವಾರ್ನರ್ 38 ಎಸೆತಗಳಲ್ಲಿ 48 ರನ್ ಗಳಿಸಿದರೆ, ಪಾಂಡೆ 44 ಎಸೆತಗಳಲ್ಲಿ 2 ಬೌಂಡರಿ ಮತ್ತು 3 ಸಿಕ್ಸರ್ ಸಹಿತ 54 ರನ್ ಬಾರಿಸಿದರು. ಕೊನೆಯಲ್ಲಿ ಬಿರುಸಾಗಿ ಆಡಿದ ಕೇನ್ ವಿಲಿಯಮ್ಸನ್ (22), ಪ್ರಿಯಂ ಗರ್ಗ್ (15) ತಂಡದ ಮೊತ್ತವನ್ನು 150ರ ಗಡಿ ದಾಟಿಸಿದರು.
ಕಾರ್ತಿಕ್ ತ್ಯಾಗಿ, ಜೋಫ್ರಾ ಆರ್ಚರ್ ಮತ್ತು ಜಯದೇವ್ ಉನದ್ಕಟ್ ತಲಾ ಒಂದೊಂದು ವಿಕೆಟ್ ಗಳಿಸಿದರು.