ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ ಮಿಮಿಕ್ರಿ ರಾಜಗೋಪಾಲ್ ವಿಧಿವಶರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸು ಆಗಿತ್ತು. ಕಿಡ್ನಿ, ಆಸ್ತಮಾ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಕೆಂಗೇರಿಯ ಬಿಡಿಎ ಅಪಾರ್ಟ್ಮೆಂಟ್ನಲ್ಲಿ ಅವರು ನಿಧನರಾದರು. ಇಂದು ಮಧ್ಯಾಹ್ನ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.
ಅವರು ಈವರೆಗೆ ಒಟ್ಟು 650 ಸಿನಿಮಾಗಳಲ್ಲಿ ನಟಿಸಿದ್ದರು.