ಕರಾಚಿಯಲ್ಲಿ ಪ್ರಯಾಣಿಕ ವಿಮಾನ ಪತನ: ಕಣ್ಣೆದುರೇ ವಸತಿ ಪ್ರದೇಶದ ಮೇಲೆ ಧಗಧಗಿಸಿದ ಏರ್ ಬಸ್

0
649

ಕರಾಚಿ: ಸುಮಾರು 99 ಪ್ರಯಾಣಿಕರು ಮತ್ತು 8 ಸಿಬ್ಬಂದಿಗಳನ್ನು ಹೊತ್ತೊಯ್ಯುತ್ತಿದ್ದ ಪಾಕಿಸ್ತಾನ ಇಂಟರ್ನ್ಯಾಷನಲ್ ಏರ್‌ಲೈನ್ಸ್ ವಿಮಾನ, ಕರಾಚಿ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಗಿದೆ ಎಂದು ಪಾಕಿಸ್ತಾನದ ಮಾಧ್ಯಮಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
ಜೊತೆಗೆ ಕರಾಚಿ ವಿಮಾನ ನಿಲ್ದಾಣದಿಂದ ಸ್ವಲ್ಪ ದೂರದ ವಸತಿ ಪ್ರದೇಶದ ಆಕಾಶದಲ್ಲಿ ದಟ್ಟ ಹೊಗೆ ಕಾಣಿಸುತ್ತಿರುವ ದೃಶ್ಯಗಳನ್ನು ಪಾಕಿಸ್ತಾನದ ಸುದ್ದಿ ವಾಹಿನಿಗಳು ವರದಿ ಮಾಡಿದೆ. ಪ್ರಾಥಮಿಕ ಮಾಹಿತಿಗಳ ಅನ್ವಯ ವಿಮಾನದಲ್ಲಿ 99 ಪ್ರಯಾಣಿಕರು ಮತ್ತು 8 ಸಿಬ್ಬಂದಿಗಳಿದ್ದರು. ಪಾಕಿಸ್ತಾನದ ಇಂಟರ್ನ್ಯಾಷನಲ್ ಏರ್ ಲೈನ್ಸ್ ಗೆ ಸೇರಿದ ಏರ್ ಬಸ್ ಏರ್ಬಸ್ ಎ 320 ಪಿಕೆ 8303 ದೇಶೀಯ ವಿಮಾನ ಇದಾಗಿದ್ದು ಕರಾಚಿ ವಿಮಾನ ನಿಲ್ದಾಣದ ಸಮೀಪದಲ್ಲಿ, ಮಾಲಿರ್ ಕಂಟೋನ್ಮೆಂಟ್, ಜಿನ್ನಾ ಗಾರ್ಡನ್ (ಮಾಡೆಲ್ ಕಾಲೋನಿ) ಬಳಿ ಅಪಘಾತಕ್ಕೀಡಾಗಿದೆ ಎಂದು ಹೇಳಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

LEAVE A REPLY

Please enter your comment!
Please enter your name here