Wednesday, August 10, 2022

Latest Posts

ಕರಾವಳಿಯಲ್ಲಿ ಭಾರೀ ಮಳೆ: ನಾಳೆ ನಿಗದಿಯಾಗಿದ್ದ ‘ಮಂಗಳೂರು ವಿವಿ’ ಸ್ನಾತಕ, ಸ್ನಾತಕೋತ್ತರ ಪದವಿ ಪರೀಕ್ಷೆಗಳು ಮುಂದೂಡಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಮಂಗಳೂರು ವಿವಿ ವ್ಯಾಪ್ತಿಯ ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ, ಜನರು ಮನೆಯಿಂದ ಹೊರಬರಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ, ನಾಳೆಯಿಂದ ಆರಂಭಗೊಳ್ಳಬೇಕಿದ್ದಂತ ಮಂಗಳೂರು ವಿಶ್ವವಿದ್ಯಾಲಯದ ಸ್ನಾತಕ, ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವಂತ ಮಂಗಳೂರು ವಿಶ್ವವಿದ್ಯಾಲಯ ಪರೀಕ್ಷಾಂಗ ವಿಭಾಗದ ಕುಲಸಚಿವರು, ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ವಿಪರೀತ ಮಳೆ ಹಾಗೂ ಭಾರಿ ಗಾಳಿ ಬೀಸುತ್ತಿರುವ ಹಿನ್ನಲೆಯಲ್ಲಿ, ಮಂಗಳೂರು ವಿಶ್ವವಿದ್ಯಾಲಯವು ದಿನಾಂಕ 21-09-2020ರಂದು ನಿಗಧಿಪಡಿಸಲಾಗಿದ್ದ ಎಲ್ಲಾ ಸ್ನಾತಕ, ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರಿಷ್ಕೃತ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲೇ ನಿಗದಿ ಪಡಿಸಲಾಗುತ್ತದೆ. ಉಳಿದಂತೆ ಈ ಹಿಂದೆ ಪ್ರಕಟಿಸಿದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss