ಮಂಗಳೂರು: ಕರಾವಳಿ ಪ್ರದೇಶಗಳಲ್ಲಿ ಮುಂದಿನ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಮಳೆಯ ಜೊತೆಯಲ್ಲಿ ಕಡಲು ಕೂಡಾ ಪ್ರಕ್ಷುಬ್ದಗೊಳ್ಳುವ ಸಾಧ್ಯತೆಯಿದ್ದು, ತೀರದ ನಿವಾಸಿಗಳು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ಮಂಗಳವಾರ ಮುಂಜಾನೆಯಿಂದಲೇ ಮಳೆ ವಾತಾವರಣ ಕಾಣಿಸಿಕೊಂಡಿದೆ. ಕೆಲವೆಡೆ ಗುಡುಗಿನಿಂದ ಕೂಡಿದ ಮಳೆಯಾಗುತ್ತಿದೆ.