ಹೊಸದಿಗಂತ ಆನ್ ಲೈನ್ ಡೆಸ್ಕ್:
ಕರಾವಳಿಯ ಜನಪದ ಕ್ರೀಡೆ ಕಂಬಳದಲ್ಲಿ ಬೈಂದೂರಿನ ವಿಶ್ವನಾಥ್ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಈ ಮೂಲಕ ಕಂಬಳ ಓಟದಲ್ಲಿ ದಾಖಲೆ ಬರೆದು ಉಸೇನ್ ಬೋಲ್ಟ್ ಕೀರ್ತಿಗೆ ಪಾತ್ರರಾಗಿದ್ದ ಶ್ರೀನಿವಾಸ ಗೌಡರ ದಾಖಲೆಯನ್ನು ಹಿಂದಿಕ್ಕಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಿನ್ನಿಗೋಳಿ ಸಮೀಪದ ಐಕಳದಲ್ಲಿ ನಡೆದ ಕಂಬಳದಲ್ಲಿ ಬೈಂದೂರಿನ ವಿಶ್ವನಾಥ್ ಓಡಿಸಿದ ಕೋಣಗಳು 9.15 ಸೆಕೆಂಡ್ಗಳಲ್ಲಿ 100 ಮೀಟರ್ ಓಡಿವೆ. ಕಂಬಳದ ಉಸೇನ್ ಬೋಲ್ಟ್ ಎಂದು ಖ್ಯಾತರಾಗಿದ್ದ ಶ್ರೀನಿವಾಸ್ ಗೌಡರು ಕಳೆದ ವರ್ಷ 9.55 ಸೆಕೆಂಡ್ನಲ್ಲಿ ದಾಖಲೆ ಮಾಡಿದ್ದರು. ಈ ಬಾರಿ ವಿಶ್ವನಾಥ್, ಶ್ರೀನಿವಾಸ ಗೌಡರ ದಾಖಲೆ ಮುರಿದು ಹೊಸ ದಾಖಲೆ ಸೃಷ್ಟಿಸಿದ್ದಾರೆ.