ಬೆಂಗಳೂರು: ಮಳೆಯ ಅಬ್ಬರ ಇನ್ನೂ ಹೆಚ್ಚುವ ಬಗ್ಗೆ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ ೨೦ರವರೆಗೂ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಲಿದ್ದು, ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ ೨೦ ತನಕ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ವಿಜಯಪುರ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿಯಲ್ಲಿ ಭಾರೀ ಮಳೆಯಾಗುವ ಬಗ್ಗೆ ಹವಮಾನ ಇಲಾಖೆ ತಿಳಿಸಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.