Sunday, July 3, 2022

Latest Posts

ಕರಿಯಕಲ್ಲು ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಮತ್ತೆ ಧಗಧಗಿಸಿದ ಬೆಂಕಿ!

ಹೊಸ ದಿಗಂತ ವರದಿ, ಕಾರ್ಕಳ:

ಉಡುಪಿ ಜಿಲ್ಲೆಯ ಕಾರ್ಕಳ ಪುರಸಭೆ ವ್ಯಾಪ್ತಿಯ ಕರಿಯಕಲ್ಲು ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಸೋಮವಾರ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕ ದಳದ ಮಿಂಚಿನ ಕಾರ್ಯಾಚರಣೆಯಲ್ಲಿ ಬೆಂಕಿ ನಂದಿಸಲಾಗಿದೆ.
ಪುರಸಭೆಯ ೧೩ನೇ ವಾರ್ಡ್‌ನಲ್ಲಿರುವ ಕರಿಯಕಲ್ಲು  ಘನ ತ್ಯಾಜ್ಯ ನಿರ್ಹಹಣಾ ಘಟಕದಲ್ಲಿ ಈ ಅವಘಡ ಸಂಭವಿಸಿದೆ. ಇದಕ್ಕೂ ಮುನ್ನ  ಮಾ.೨೦ ಹಾಗೂ ಮಾ.೨೪ರಂದು ಎರಡು ಬಾರಿ ಇಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಇಲ್ಲಿ ಸೆಕ್ಯೂರಿಟಿ ಗಾರ್ಡ್ ನೇಮಿಸಲಾಗಿದ್ದರೂ, ಆಗಾಗ ಬೆಂಕಿ ಅವಘಡ ಸಂಭವಿಸುತ್ತಿರುವುದು ನಾಗರಿಕರಲ್ಲಿ ಅಚ್ಚರಿ ಮೂಡಿಸಿದೆ.
ಈ ಭಾಗದಲ್ಲಿ  ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಲಾಗುತ್ತಿದೆಯೇ ಎನ್ನವ ಅನುಮಾನವನ್ನು ಸಾರ್ವಜನಿಕರು ವ್ಯಕ್ತಪಡಿಸಿದ್ದು, ಈ ಬಗ್ಗೆ ಕೂಲಂಕಷ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss