Sunday, June 26, 2022

Latest Posts

ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲಿನ ಹಲ್ಲೆ ಪ್ರಕರಣ: 6 ಮಂದಿ ಆರೋಪಿಗಳ ಬಂಧನ

ಹೊಸ ದಿಗಂತ ವರದಿ, ಮಂಗಳೂರು:

ನಗರದ ಚಿತ್ರಾ ಜಂಕ್ಷನ್ ಬಳಿ ಡಿ.16ರಂದು ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಗಂಭೀರ ಹಲ್ಲೆ ನಡೆಸಿದ 6 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರನ್ನು ಕುದ್ರೋಳಿಯ ಅನೀಶ್ ಅಶ್ರಫ್ (22), ಅಬ್ದುಲ್ ಖಾದರ್ ಫಹಾದ್ (23), ಬಜ್ಪೆಯ ಶೇಖ್ ಮಹಮ್ಮದ್ ಹ್ಯಾರಿಸ್ ಯಾನೆ ಜಿಗ್ರಿ (31), ತಣ್ಣೀರುಬಾವಿಯ ಮಹಮ್ಮದ್ ಖಾಯಿಸ್ ಯಾನೆ ಖಾಯಿಸ್ (24), ಕುದ್ರೋಳಿಯ ರಾಹಿಲ್ ಯಾನೆ ಚೋಟು ರಾಹಿಲ್ (24) ಮತ್ತು ಬಂಟ್ವಾಳದ ಮಹಮ್ಮದ್ ನವಾಜ್ (30) ಎಂದು ಗುರುತಿಸಲಾಗಿದೆ.
ಮಂಗಳವಾರ ಬೆಳಿಗ್ಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಮಂಗಳೂರು ನಗರ ಪೂಲೀಸ್ ಉಪ ಆಯುಕ್ತರಾದ ಹರಿರಾಂ ಶಂಕರ್, ವಿನಯ ಗಾಂವಕರ್, ಕೇಂದ್ರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಜಗದೀಶ್ ಅವರ ಮಾರ್ಗದರ್ಶನದಂತೆ ಪೊಲೀಸ್ ಇನ್‌ಸ್ಪೆಕ್ಟರ್ ಸವಿತ್ರತೇಜ, ಸಬ್ ಇನ್‌ಸ್ಪೆಕ್ಟರ್ ಗೋವಿಂದ ರಾಜು, ಸಿಸಿಬಿ ಪೊಲೀಸ್ ಇನ್‌ಸ್ಪೆಕ್ಟರ್ ಮಹೇಶ್‌ಪ್ರಸಾದ್ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂದಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss