ಹೊಸದಿಗಂತ, ಆನ್ಲೈನ್ ಡೆಸ್ಕ್:
ಇಂಗ್ಲೆಂಡ್ನಲ್ಲಿ ಪತ್ತೆಯಾಗಿರುವ ರೂಪಾಂತರಿತ ಸೂಪರ್ ಸ್ಪೀಡ್ ಕೊರೋನಾ ವೈರಸ್ ಕರ್ನಾಟಕಕ್ಕೂ ಕಾಲಿಟ್ಟಿರುವ ಸಾಧ್ಯತೆ ಹಿನ್ನೆಲೆಯಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಆರೋಗ್ಯ ಇಲಾಖೆಯು ಮಾರುಕಟ್ಟೆ ಪ್ರದೇಶಗಳಿಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅದರ ಅನ್ವಯ ಮಳಿಗೆ ಪ್ರವೇಶ ದ್ವಾರದಲ್ಲಿ ಹ್ಯಾಂಡ್ ಸ್ಯಾನಿಟೈಜರ್ ಅಥವಾ ಸೋಪಿನಿಂದ ಕೈ ತೊಳೆಯಲು ಅವಕಾಶ ಕಲ್ಪಿಸಬೇಕು. ಹೆಚ್ಚಿನ ದಟ್ಟಣೆ ಗಮನಿಸಲು ಸಿಸಿ ಕ್ಯಾಮೆರಾ ವ್ಯವಸ್ಥೆಯಾಗಬೇಕು. ವಸ್ತುಗಳ ಖರೀದಿಗೆ ಆನ್ಲೈನ್ ಉತ್ತೇಜನ ನೀಡಬೇಕು. ದಟ್ಟಣೆ ಇಲ್ಲದ ಅವಧಿಯಲ್ಲಿ ಬರುವ ಗ್ರಾಹಕರಿಗೆ ಡಿಸ್ಕೌಂಟ್ ನೀಡಬೇಕಾಗಿದೆ.
ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ಸರಕಾರ, ಎಲ್ಲಾ ಮಾರುಕಟ್ಟೆಗಳಲ್ಲಿ ಆರು ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲಿಸಬೇಕು. ಮಾಸ್ಕ್ ಹಾಗೂ ಗ್ಲೌಸ್ ಕಡ್ಡಾಯವಾಗಿ ಬಳಸಬೇಕು. ಕೆಮ್ಮುವಾಗ, ಸೀನುವಾಗ ತೀವ್ರ ನಿಗಾವಹಿಸಬೇಕು ಎಂದು ತಿಳಿಸಿದೆ.