Saturday, July 2, 2022

Latest Posts

ಕರ್ನಾಟಕದ ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ವಿಧಿವಶ

ಬೆಂಗಳೂರು: ಕೇಂದ್ರ ಕಾನೂನು ಸಚಿವ ಹಾಗೂ ವಿಧಾನ ಸಭೆಯ ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ (83) ವಿಧಿವಶರಾಗಿದ್ದಾರೆ.

ಹಂಸರಾಜ್ ಭಾರದ್ವಾಜ್ ಅವರು ಹೃದಯಾಘಾತದಿಂದ ಭಾನುವಾರ ನವದೆಹಲಿಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹಂಸರಾಜ್ ಅವರು ಕರ್ನಾಟಕದ ರಾಜ್ಯಪಾಲರಾಗಿದ್ದಾಗ ರಾಜ್ಯದಲ್ಲಿ ಬಿ.ಎಸ್.ವೈ ಅವರ ಸರ್ಕಾರ ಅಧಿಕಾರದಲ್ಲಿತ್ತು. ಈ ಸಂದರ್ಭದಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣ ಕುರಿತು ಮುಖ್ಯಮಂತ್ರಿ ವಿಚಾರಣೆ ನಡೆಸಲು ರಾಜ್ಯಪಾಲರಾಗಿದ್ದ ಹಂಸರಾಜ್ ಭಾರದ್ವಾಜ್ ಆದೇಶಿಸಿದ್ದರು. ಈ ಹಿನ್ನಲೆಯಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದರು.

ಇವರ ನಿಧನಕ್ಕೆ ಮಾಜಿ ರಾಷ್ಟ್ರಪತಿಗಳಾದ ಪ್ರಣಬ್ ಮುಖರ್ಜಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂದಿ ಟ್ವಿಟರ್ ನಲ್ಲಿ ಸಂತಾಪ ಸೂಚಿಸಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss