ಕರ್ನಾಟಕ ಜಿಮ್ ಮತ್ತು ಫಿಟ್‌ನೆಸ್ ಮಾಲೀಕರ ಸಂಘಕ್ಕೆ ಅಧ್ಯಕ್ಷರಾಗಿ ಎ.ವಿ. ರವಿ ನೇಮಕ

0
321

ಬೆಂಗಳೂರು: ಅಂತಾರಾಷ್ಟ್ರೀಯ ದೇಹದಾಡ್ಯ ಪಟು ಮತ್ತು ಕೋಚ್ ಡಾ. ಎ.ವಿ. ರವಿ ಕರ್ನಾಟಕ ಜಿಮ್ ಮತ್ತು ಫಿಟ್‌ನೆಸ್ ಮಾಲೀಕರ ಸಂಘದ ನೂತನ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ.ಆದಾಯ ತೆರಿಗೆ ಇಲಾಖೆಯ ಅಧಿಕಾರಿಯೂ ಆಗಿರುವ ರವಿ, ಕನ್ನಡ ಚಲನಚಿತ್ರಳಲ್ಲಿಯೂ ನಟಿಸಿದ್ದಾರೆ. ಕೊರೋನಾ ಸೋಂಕು ತಡೆಗೆ ಲಾಕ್‌ಡೌನ್ ಆದಾಗಿನಿಂದಲೂ ಜಿಮ್ನಾಷಿಯಂಗಳು ಬಂದ್ ಆಗಿವೆ. ಇತ್ತೀಚೆಗೆ ಲಾಕ್‌ಡೌನ್ ಸಡಿಲವಾದಾಗ ಹಲವು ಉದ್ಯಮಗಳು, ಮಾರುಕಟ್ಟೆಗಳಿಗೆ ತೆರೆಯಲು ಅವಕಾಶ ನೀಡಲಾಗಿದೆ. ಆದರೆ ಆರೋಗ್ಯವರ್ಧಿಸುವ ಜಿಮ್‌ಗಳಿಗೆ ಅವಕಾಶ ಕೊಟ್ಟಿಲ್ಲ. ನಾವು ಸರ್ಕಾರದ ಎಲ್ಲ ನಿಯಮಗಳನ್ನು ಪಾಲಿಸಲು ಸಿದ್ಧವಾಗಿದ್ದೇವೆ. ಸರ್ಕಾರಕ್ಕೂ ಮನವಿ ಸಲ್ಲಿಸಿದ್ದೇವೆ. ಆದರೂ ಇನ್ನೂ ಅನುಮತಿ ಸಿಕ್ಕಿಲ್ಲ. ಇದರಿಂದಾಗಿ ಜಿಮ್‌ಗಳಲ್ಲಿ ಕಾರ್ಯನಿರ್ವಹಿಸುವ ನೂರಾರು ಜನರ ಜೀವನ ತೊಂದರೆಯಲ್ಲಿದೆ. ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಅವರ ಪರವಾಗಿ ಕಾರ್ಯ ನಿರ್ವಹಿಸಲು ನಾನು ಬದ್ಧನಾಗಿದ್ದೇನೆ’ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here