ಮಡಿಕೇರಿ: ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜಾರಿಗೆ ತರಲು ಉದ್ದೇಶಿಸಿರುವ ಕೃಷಿ ಹಾಗೂ ಭೂ ಸುಧಾರಣಾ ತಿದ್ದುಪಡಿ ಮಸೂದೆಗಳನ್ನು ವಿರೋಧಿಸಿ ಬಿಜೆಪಿಯೇತರ ಪಕ್ಷಗಳು ಹಾಗೂ ವಿವಿಧ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಕೊಡಗು ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಜಿಲ್ಲೆಯಲ್ಲಿ ಅಂಗಡಿ ಮುಂಗಟ್ಟುಗಳು ಎಂದಿನಂತೆ ತೆರೆದಿದ್ದು, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಗಳೂ ಸೇರಿದಂತೆ ವಾಹನ ಸಂಚಾರ ಎಂದಿನಂತಿದೆ. ಕುಶಾಲನಗರದ ಕೊಪ್ಪ ಗೇಟ್ ಗೆ ಬೀಗ ಜಡಿದು ರಸ್ತೆ ತಡೆ ನಡೆಸಲೆತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರೆ, ಮಡಿಕೇರಿಯಲ್ಲಿ ರಸ್ತೆ ತಡೆ ಮಾಡಲು ಪ್ರಯತ್ನಿಸಿದ ಕಾಂಗ್ರೆಸ್, ಜೆಡಿಎಸ್, ಎಸ್ ಡಿಪಿಐ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಮಡಿಕೇರಿ,ಗೋಣಿಕೊಪ್ಪ,ಕುಶಾಲನಗರ, ಸುಂಟಿಕೊಪ್ಪ, ಸೋಮವಾರಪೇಟೆಯಲ್ಲೂ ಬಂದ್ ಬಿಸಿ ತಟ್ಟಿಲ್ಲ. ಮಡಿಕೇರಿಯಿಂದ ಕುಶಾಲನಗರ ಹಾಸನ,ಮೈಸೂರು ಕಡೆಗೆ ಎಂದಿನಂತೆ ಬಸ್ ಸಂಚಾರವಿತ್ತಾದರೂ ಪ್ರಯಾಣಿಕರ ಸಂಖ್ಯೆ ವಿರಳವಾಗಿತ್ತು.