spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕರ್ನಾಟಕ ಬಂದ್‌ಗೆ ಸಂಪೂರ್ಣ ಬೆಂಬಲ: ವಾಟಾಳ್ ನಾಗರಾಜ್

- Advertisement -Nitte
ರಾಮನಗರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೃಷಿ, ಎಪಿಎಂಸಿ, ಭೂ ಮಸೂದೆ ಹಾಗೂ ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ಸೆ.೨೮ರಂದು ಪ್ರಗತಿಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳ ಒಕ್ಕೂಟ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದರು.

ನಗರದ ಐಜೂರು ವೃತ್ತದಲ್ಲಿ  ಸಾಂಕೇತಿಕವಾಗಿ ರಸ್ತೆತಡೆ ನಡೆಸುವ ಮೂಲಕ ನಾಡಿನ ಅನ್ನದಾತ ರೈತರ ಹಿತರಕ್ಷಣೆ ದೃಷ್ಟಿಯಿಂದ ಸೋಮವಾರ ಬಂದ್ ನಲ್ಲಿ ತಮ್ಮ ನೇತೃತ್ವದ ಕನ್ನಡಪರ ಸಂಘಟನೆಗಳ ಒಕ್ಕೂಟ ಭಾಗಿಯಾಗಲಿದೆ ಎಂದು ಘೋಷಿಸಿದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ವಾಟಾಳ್ ನಾಗರಾಜ್, ಬಿಎಸ್ ವೈ ಯಾರ ಮಾತನ್ನು ಕೇಳುತ್ತಿಲ್ಲ, ಇದು ತಮ್ಮ ಕೊನೆಯ ಅಡಳಿತಾವಧಿ ಎಂಬುದನ್ನು ಮನಗಂಡಿರುವ ಅವರು, ತಮ್ಮ ಸರ್ವಾಧಿಕಾರಿ ಧೋರಣೆ ಹಾಗೂ ಬ್ರಹ್ಮಾಂಡ ಭ್ರಷ್ಟಾಚಾರದ ಮೂಲಕ ಕರ್ನಾಟಕವನ್ನು ಅಧೋಗತಿಗೆ ನೂಕುತ್ತಿದ್ದಾರೆ ಎಂದು ನೇರವಾಗಿ ಆರೋಪಿಸಿದರು. ಮಂತ್ರಿ ಮಂಡಲದ ಅನೇಕರು ಕೂಡ ಲೂಟಿ ಹೊಡೆಯುವುದರಲ್ಲಿ ನಿರತರಾಗಿದ್ದು, ಯಡಿಯೂರಪ್ಪ ವಿರುದ್ಧ ಸೊಲ್ಲತ್ತಲು ಸಾಧ್ಯವಿಲ್ಲದ ನಾಲಾಯಕ್ ಗಳಾಗಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಟಾಳ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಮುದಾಯಕ್ಕೆ ಮಾರಕವಾಗಿರುವ ಕಾಯ್ದೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೇ ಹಿಂತೆಗೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ಕರ್ನಾಟಕ ಬಂದ್ ನಂತರವೂ ರಾಜ್ಯ ಸರಕಾರದ ವಿರುದ್ಧ ನಿರಂತರವಾಗಿ ಪ್ರತಿಭಟನೆ ನಡೆಸುವುದಾಗಿ ವಾಟಾಳ್ ಎಚ್ಚರಿಸಿದರು.
- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss