Wednesday, August 10, 2022

Latest Posts

ಕರ್ನಾಟಕ ಬಂದ್ ಗೆ ರಾಮನಗರ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ

ರಾಮನಗರ: ರಾಮನಗರ ಜಿಲ್ಲೆಯಲ್ಲಿ ಇಂದು ನಡೆದ ಬಂದ್ ಗೆ ಜನರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು
ಬೆಳಿಗ್ಗೆ 10 ಗಂಟೆಗೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಎ. ಪಿ. ಎಂ ಸಿ ಆವರಣದಲ್ಲಿ ಸೇರಿ ಅಲ್ಲಿಂದ ಹೊರಟು ಐಜೂರು ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು
ಅನಂತರ ಬೈಕ್ ನಲ್ಲಿ ನಗರದ ವಿವಿಧ ಭಾಗಗಳಲ್ಲಿ ತೆರೆದಿದ್ದ ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸಿದ್ದರು
ಮತ್ತೆ ಸಕ೯ಲ್ ನಲ್ಲಿ ಸೇರಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ. ಎಪಿಎಂಸಿ ತಿದ್ದುಪಡಿ ಕಾಯ್ದೆ ರೈತರಿಗೆ ಅನುಕೂಲವಾಗುವ ಬದಲು ಅನುಕೂಲವಾಗತಿದೆ ಎಂದು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ವಿರುದ್ಧ ಘೋಷಣೆ ಕೂಗಿದರು
ವಾಹನ ಸಂಚಾರ ದಟ್ಟಣೆ ಎಂದಿನಂತೆ ಇತ್ತು ಬೆಂಗಳೂರು ಮತ್ತು ಮೈಸೂರು ರಸ್ತೆಯಲ್ಲಿ ವಾಹನ ಸಂಚಾರ ಸುಗಮವಾಗಿತ್ತು
ಈ ಪ್ರತಿಭಟನೆಯಲ್ಲಿ ಹಲವಾರು ರೈತ ಸಂಘಟನೆಗಳ ಒಕ್ಕೂಟ ಹಾಗೂ ಕನ್ನಡ ಪರ ಸಂಘಟನೆಗಳು ಭಾಗವಹಿಸಿದ್ದವು

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss