ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊರೋನಾ ದೃಢಪಟ್ಟಿದೆ.
ಕೊರೋನಾ ಪರೀಕ್ಷೆಗೆ ಒಳಪಟ್ಟ ನಳಿನ್ ಕುಮಾರ್ ಕಟೀಲ್ ಅವರು ಯಾವುದೇ ರೋಗಲಕ್ಷಣಗಳಿಲ್ಲದೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಸ್ವತಃ ನಳಿನ್ ಕುಮಾರ್ ಅವರೇ ಟ್ವೀಟ್ ಮಾಡಿದ್ದಾರೆ
ನಾನು #COVID19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ.
ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡುತ್ತೇನೆ.
— Nalinkumar Kateel (@nalinkateel) August 30, 2020