ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಪರೀಕ್ಷೆ ಬರೆಯಲು ಅವಕಾಶ

0
205

ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2001-02ರಿಂದ 2010-11ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶಾತಿ ಪಡೆದ ಸ್ನಾತಕ ಪದವಿಗಳಾದ ಬಿ.ಎ./ಬಿ.ಕಾಂ. ಪದವಿಗಳು, 2001-02ರಿಂದ 2012-13ನೇ ಸಾಲಿನಲ್ಲಿ ಪ್ರವೇಶಾತಿ ಪಡೆದ ಸ್ನಾತಕ್ಕೋತ್ತರ ಪದವಿಗಳಾದ ಎಂ.ಎ./ಎಂ.ಕಾಂ., ಎಂ.ಬಿ.ಎ., ಎಂ.ಎಡ್., ಬಿ.ಎಡ್., ಎಂ.ಎಸ್ಸಿ., ಸ್ನಾತಕೋತ್ತರ ಮತ್ತು ಡಿಪ್ಲೊಮಾ ವಿಷಯಗಳು ಹಾಗೂ ಸರ್ಟಿಫೀಕೆಟ್ ಕೋರ್ಸ್‌ಗಳಲ್ಲಿ ಅನುತ್ತೀರ್ಣಗೊಂಡಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳ ಮನವಿ ಮೇರೆಗೆ ವಿಶ್ವವಿದ್ಯಾನಿಲಯದ ಚಾಲ್ತಿಯಲ್ಲಿರುವ ಪಠ್ಯಕ್ರಮಗಳ ಅನುಗುಣವಾಗಿ ಒಂದು ಬಾರಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.

ದಂಡಶುಲ್ಕವಿಲ್ಲದೇ ಜೂನ್ 30ರವರೆಗೆ ಪರೀಕ್ಷೆ ಕಟ್ಟುವುದಕ್ಕೆ ಅವಕಾಶ ನೀಡಲಾಗಿದೆ. ಸದರಿ ಸಾಲಿನ ಪರೀಕ್ಷಾ ವೇಳಾಪಟ್ಟಿಯನ್ನು ವಿಶ್ವವಿದ್ಯಾನಿಲಯದ ವೆಬ್‌ಸೈಟ್ www.ksoumysuru.ac.in ನಲ್ಲಿ ಪ್ರಕಟಿಸಲಾಗುವುದು. ಹೆಚ್ಚಿನ ಮಾಹಿತಿಗೆ ವಿದ್ಯಾರ್ಥಿಗಳು ದೂರಾವಾಣಿ ಸಂಖ್ಯೆ: 0821-2519942, 0821-2515405 ಮತ್ತು ವಿವಿ ಪ್ರಾದೇಶಿಕ ಕೇಂದ್ರ ಉಡುಪಿ ಕಚೇರಿ ಹಾಗೂ ಮೇಲಿನ ವಿವಿ ವೆಬ್‌ಸೈಟ್‌ನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ಪ್ರಾದೇಶಿಕ ನಿರ್ದೇಶಕ ಡಾ. ಕೆ.ಪಿ.ಮಹಾಲಿಂಗಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here