Saturday, August 13, 2022

Latest Posts

ಕಲಬುರಗಿ: ಕೊರೋನಾ ಸೋಂಕಿನಿಂದ ಜಿಲ್ಲೆಯಲ್ಲಿ ಮತ್ತೆ 6 ಜನ ನಿಧನ

ಕಲಬುರಗಿ: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯಲ್ಲಿ ಮತ್ತೆ 6 ಜನ ನಿಧನರಾಗಿರುವ ಬಗ್ಗೆ ಶುಕ್ರವಾರ ವರದಿಯಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 254ಕ್ಕೆ ಏರಿಕೆಯಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯಿಂದ ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮದ 50 ವರ್ಷದ ಪುರುಷ (P-311285) ಸೆ.25 ರಂದು ಆಸ್ಪತ್ರೆಗೆ ದಾಖಲಾಗಿ ಸೆ.29 ರಂದು ರಂದು ನಿಧನರಾಗಿದ್ದಾರೆ.

ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ಕೆ.ಹೆಚ್.ಬಿ.ಕಾಲೋನಿಯ 68 ವರ್ಷದ ವೃದ್ಧೆ (P-335141) ಆ.27 ರಂದು ಆಸ್ಪತ್ರೆಗೆ ದಾಖಲಾಗಿ ಸೆ.15 ರಂದು ನಿಧನರಾಗಿದ್ದಾರೆ.

ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹ, ಅಧಿಕ ರಕ್ತದೊತ್ತಡ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಕಲಬುರಗಿಯ ಅತ್ತರ್ ಕಂಪೌಂಡ್ ನಿವಾಸಿ 60 ವರ್ಷದ ವೃದ್ಧ (P-414730) ಸೆ.9 ರಂದು ಆಸ್ಪತ್ರೆಗೆ ದಾಖಲಾಗಿ ಸೆ.14 ರಂದು ನಿಧನರಾಗಿದ್ದಾರೆ.

ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹ, ಅಧಿಕ ರಕ್ತದೊತ್ತಡ ಹಾಗೂ ಅಸ್ತಮಾದಿಂದ ಬಳಲುತ್ತಿದ್ದ ಕಲಬುರಗಿಯ ಭವಾನಿ‌ ನಗರದ 68 ವರ್ಷದ ವೃದ್ಧ (P-419765) ಸೆ.14 ರಂದು ಆಸ್ಪತ್ರೆಗೆ ದಾಖಲಾಗಿ ಸೆ.15 ರಂದು ನಿಧನರಾಗಿದ್ದಾರೆ.

ತೀವ್ರ ಉಸಿರಾಟ ತೊಂದರೆ ಜೊತೆಗೆ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಶಹಾಬಾದ ಪಟ್ಟಣದ ಬಸವೇಶ್ವರ ನಗರದ 59 ವರ್ಷದ ಪುರುಷ (P-443239) ಸೆ.9 ರಂದು ಆಸ್ಪತ್ರೆಗೆ ದಾಖಲಾಗಿ ಸೆ.15 ರಂದು ನಿಧನರಾಗಿದ್ದಾರೆ.

ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯಿಂದ ಕಮಲಾಪುರ ತಾಲೂಕಿನ ರಾಜನಾಳ ಗ್ರಾಮದ 45 ವರ್ಷದ ಪುರುಷ (P-458640) ಸೆ.10 ರಂದು ಆಸ್ಪತ್ರೆಗೆ ದಾಖಲಾಗಿ ಸೆ.15 ರಂದು ನಿಧನರಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss