Wednesday, August 10, 2022

Latest Posts

ಕಲಬುರಗಿ ಜಿಲ್ಲೆಯಲ್ಲಿ ಶನಿವಾರ 34 ಜನರಲ್ಲಿ ಕೊರೋನಾ ದೃಢ: 1160ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ

ಕಲಬುರಗಿ:  ತಿಂಗಳ ಮಗು ಸೇರಿ 7 ಮಕ್ಕಳು, 14 ಮಹಿಳೆಯರು ಹಾಗೂ 13 ಮಂದಿ ಪುರುಷರಲ್ಲಿ ಸೋಂಕು ಪತ್ತೆಯಾಗಿದೆ. ಈ ಪೈಕಿ ಇಬ್ಬರ ಟ್ರಾವೆಲ್ ಹಿಸ್ಟರಿ ಪತ್ತೆಯಾಗಿಲ್ಲ. 5 ಜನರಿಗೆ ಸೋಂಕಿತರ ಸಂಪರ್ಕದಿಂದ ಸೋಂಕು ತಗುಲಿದೆ. ಒಬ್ಬರು ಬೆಂಗಳೂರು, ಮತ್ತೊಬ್ಬರು ಯಾದಗಿರಿಯಿಂದ ವಾಪಸಾಗಿದ್ದವರಾಗಿದ್ದಾರೆ. ಉಳಿದವರು ಮಹಾರಾಷ್ಟ್ರದಿಂದ ವಾಪಸಾದ ವಲಸಿಗರು ಎಂದು ತಿಳಿದು ಬಂದಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1160ಕ್ಕೆ ಏರಿಕೆಯಾಗಿದ್ದು, ಇಂದು 42 ಜನರು ಗುಣಮಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಮಕ್ಕಳಲ್ಲಿ ಹೆಚ್ಚುತ್ತಿರುವ ಸೋಂಕು…
ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಕ್ಕಳಲ್ಲಿಯೇ ಹೆಚ್ಚು ಸೊಂಕು ಕಂಡು ಬರುತ್ತಿದೆ. ನಿನ್ನೆ 6 ತಿಂಗಳ ಹಸುಗೂಸಿಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಇಂದು ಮತ್ತೆ 9 ತಿಂಗಳ ಮಗುವಿನಲ್ಲಿ ಸೋಂಕು ಕಾಣಿಸಿಕೊಂಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss