Thursday, August 11, 2022

Latest Posts

ಕಲಬುರಗಿ ಜಿಲ್ಲೆಯಲ್ಲಿ 232 ಮಂದಿಗೆ ಕೊರೋನಾ ಪಾಸಿಟಿವ್  ದೃಢ

ಕಲಬುರಗಿ: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ಮೂವರು ನಿಧನವಾಗಿರುವ ಬಗ್ಗೆ ಗುರುವಾರ ವರದಿಯಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 198ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.
ತೀವ್ರ ಉಸಿರಾಟ ತೊಂದರೆ ಜೊತೆಗೆ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಜಿಲ್ಲೆಯ ಶಹಾಬಾದ ಪಟ್ಟಣದ 65 ವರ್ಷದ ವೃದ್ಧ (P-238222) ಆ.25 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಆ.26 ರಂದು ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ರಾಜಾಪುರ ಕಾಲೋನಿಯ 74 ವರ್ಷದ ವೃದ್ಧೆ (P-312527) ಆ.25 ರಂದು ಆಸ್ಪತ್ರೆಗೆ ದಾಖಲಾಗಿ ಆ.26 ರಂದು ನಿಧನರಾಗಿದ್ದಾರೆ.ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ರಾಜಾಪುರ ಕಾಲೋನಿಯ 70 ವರ್ಷದ ವೃದ್ಧ (P-316121) ಆ.25 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಆ.26 ರಂದು ನಿಧನ ಹೊಂದಿದ್ದಾರೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದರು.
ಅದರಂತೆ ಗುರುವಾರ 232 ಪಾಸಿಟಿವ್ ಕೇಸ್ ವರದಿಯಾಗಿದ್ದು. ಸೊಂಕಿತರ ಸಂಖ್ಯೆ ಒಟ್ಟು 10957ಕ್ಕೆ ಎರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss