Sunday, August 14, 2022

Latest Posts

ಕಲಬುರಗಿ ಜಿಲ್ಲೆಯಲ್ಲಿ 238 ಮಂದಿಗೆ ಕೊರೋನಾ ಪಾಸಿಟಿವ್ ದೃಢ, ಸೋಂಕಿತರ ಸಂಖ್ಯೆ 5767ಕ್ಕೆ ಏರಿಕೆ , 6 ಜನರ ಸಾವು

ಕಲಬುರಗಿ: ಜಿಲ್ಲೆಯಲ್ಲಿ  238 ಮಂದಿಗೆ ಕೊರೋನಾ ಪಾಸಿಟಿವ್ ವರದಿಗಳು ದೃಢವಾಗಿದ್ದು, ಸೋಂಕಿತರ ಸಂಖ್ಯೆ ಒಟ್ಟು 5767 ಕ್ಕೆ ಎರಿದೆ. ಸೋಂಕಿಗೆ ಮತ್ತೆ ಆರು ಜನ ನಿಧನರಾಗಿರುವ ಬಗ್ಗೆ ರವಿವಾರ ದೃಢವಾಗಿದ್ದು, ಇದರಿಂದ ಇದೂವರೆಗೆ ಮೃತರಾದವರ ಸಂಖ್ಯೆ 106ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದರು.
ತೀವ್ರ ಉಸಿರಾಟ ತೊಂದರೆ ಜೊತೆಗೆ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿ ನಗರದ 69 ವರ್ಷದ ವೃದ್ಧೆ (P-57367) ಜು.10 ರಂದು ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹ, ರಕ್ತದೊತ್ತಡ ಹಾಗೂ ಕಿಡ್ನಿ ವೈಫಲ್ಯ ಸಮಸ್ಯೆಯಿಂದ ಬಳಲುತ್ತಿದ್ದ ಶಹಾಬಾದ ಪಟ್ಟಣದ 65 ವರ್ಷದ ವೃದ್ಧೆ (P-94141) ಜು.21 ರಂದು ಆಸ್ಪತ್ರೆಗೆ ದಾಖಲಾಗಿ ಆ.1 ರಂದು ನಿಧನ ಹೊಂದಿದ್ದಾರೆ. ಐ.ಎಲ್.ಐ ಜೊತೆಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ಪ್ರಶಾಂತ‌ ನಗರದ 80 ವರ್ಷದ ವೃದ್ಧೆ (P-95090) ಜು.31 ರಂದು ಆಸ್ಪತ್ರೆಗೆ ದಾಖಲಾಗಿ ಅಂದೇ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹ, ಅಧಿಕ ರಕ್ತದೊತ್ತಡ ಹಾಗೂ ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ ಕಲಬುರಗಿಯ ಶ್ರೀ ನಗರದ 85 ವರ್ಷದ ವೃದ್ಧ (P-109845) ಜು.22 ರಂದು ಆಸ್ಪತ್ರೆಗೆ ದಾಖಲಾಗಿ ಜು.24ರಂದು ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹದಿಂದ ಬಳಲುತ್ತಿದ್ದ ಚಿತ್ತಾಪುರ ತಾಲೂಕಿನ ಆರ್.ಸಿ.ತಾಂಡಾ ವಾಡಿಯ 70 ವರ್ಷದ ವೃದ್ಧ (P-112973) ಜು.25 ರಂದು ಆಸ್ಪತ್ರೆಗೆ ದಾಖಲಾಗಿ ಜು.31 ರಂದು ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ವರ್ಧಾ ನಗರದ 57 ವರ್ಷದ ಪುರುಷ (P-130534) ಜು.28 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಜು.29 ರಂದು ನಿಧನ ಹೊಂದಿದ್ದಾರೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss