ಕಲಬುರಗಿ: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯಲ್ಲಿ ಮತ್ತಿಬ್ಬರು ನಿಧನವಾಗಿರುವ ಬಗ್ಗೆ ಭಾನುವಾರ ವರದಿಯಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 163ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದರು.
ತೀವ್ರ ಉಸಿರಾಟ ತೊಂದರೆ ಹಿನ್ನೆಲೆ ಜೊತೆಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ಶಿವಶಕ್ತಿ ನಗರದ 58 ವರ್ಷದ ಪುರುಷ (P-94679) ಜು.23 ರಂದು ನಿಧನರಾಗಿದ್ದಾರೆ.
ತೀವ್ರ ಉಸಿರಾಟ ತೊಂದರೆ ಜೊತೆಗೆ ಅಧಿಕ ರಕ್ತದೊತ್ತಡ ಹಾಗೂ ನ್ಯುಮೋನಿಯಾದಿಂದ ಬಳಲುತ್ತಿದ್ದ ಕಲಬುರಗಿಯ ಐಯ್ಯರವಾಡಿ ಪ್ರದೇಶದ 60 ವರ್ಷದ ವೃದ್ಧೆ (P-223068) ಆ.7 ರಂದು ನಿಧನ ಹೊಂದಿದ್ದಾರೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದರು. ಅದರಂತೆ ಭಾನುವಾರ 285 ಪಾಸಿಟಿವ್ ಪ್ರಕರಣ ಕಂಡುಬಂದಿದ್ದು, ಸೊಂಕಿತರ ಸಂಖ್ಯೆ ಒಟ್ಟು 8825ಕ್ಕೆ ಎರಿಕೆಯಾಗಿದೆ