Thursday, August 11, 2022

Latest Posts

ಕಲಬುರಗಿ ಜಿಲ್ಲೆಯಾದ್ಯಂತ ಆಗಸ್ಟ್ 6ರವರೆಗೆ ಮದ್ಯಮಾರಾಟ ನಿಷೇಧ

ಕಲಬುರಗಿ: ಬುಧವಾರ ಆಗಸ್ಟ್ 5 ರಂದು ಆಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಾಣಕ್ಕಾಗಿ ಶಿಲಾನ್ಯಾಸ ಭೂಮಿ ಪೂಜೆ ನಡೆಯಲಿದೆ. ಈ ಸಂದರ್ಭದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಲು ಅನುಕೂಲವಾಗುವಂತೆ ಮುಂಜಾಗ್ರತಾ ಕ್ರಮವಾಗಿ ಕಲಬುರಗಿ ಜಿಲ್ಲೆಯಾದ್ಯಂತ 2020ರ ಆಗಸ್ಟ್ 4ರ ಮಧ್ಯಾಹ್ನ 3 ರಿಂದ ಆಗಸ್ಟ್ 6ರ ಬೆಳಗಿನ 6 ಗಂಟೆಯವರೆಗೆ ಎಲ್ಲ ತರಹದ ಮದ್ಯ ಮಾರಾಟ ನಿಷೇಧಿಸಿ ಹಾಗೂ ಸಿ.ಆರ್.ಪಿ.ಸಿ. ಕಲಂ 144 ನಿಷೇಧಾಜ್ಞೆ ಜಾರಿಗೊಳಿಸಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಶರತ್ ಬಿ. ಅವರು ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಅಬಕಾರಿ ಕಾಯ್ದೆ 1965 ರ ಕಲಂ 21ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಆದೇಶ ಹೊರಡಿಸಿದ್ದಾರೆ. ಈ ಸಂದರ್ಭದಲ್ಲಿ ಎಲ್ಲ ತರಹದ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದ್ದು, ಬಾರ್ ಮತ್ತು ರೆಸ್ಟಾರೆಂಟ್‍ಗಳನ್ನು ಸಹ ಮುಚ್ಚಬೇಕು.ಜಿಲ್ಲೆಯಾದ್ಯಂತಹ ಕಲಂ 144 ನಿಷೇಧಾಜ್ಞೆ ಜಾರಿ: ಈ ಸಂದರ್ಭದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಲು ಅನುಕೂಲವಾಗುವಂತೆ ಸಿ.ಆರ್.ಪಿ.ಸಿ. ಕಲಂ 144 ರನ್ವಯ ಕಲಬುರಗಿ ಜಿಲ್ಲೆಯಾದ್ಯಂತ ಮೇಲ್ಕಂಡ ದಿನಗಳಂದು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅದೇ ರೀತಿ ಸ್ಪೋಟಕ ವಸ್ತುಗಳ ಮಾರಾಟ ಹಾಗೂ ಸ್ಫೋಟಿಸುವುದನ್ನು ಸಹ ನಿಷೇಧಿಸಿ ಡಿ.ಸಿ. ಶರತ್ ಬಿ. ಅವರು ಆದೇಶ ಹೊರಡಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss