Thursday, August 11, 2022

Latest Posts

ಕಲಬುರಗಿ| ಪಶು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸಚಿವ ಪ್ರಭು ಚವ್ಹಾಣ್ ದಿಢೀರ್ ಭೇಟಿ

ಕಲಬುರಗಿ: ಪಶುಸಂಗೋಪನೆ, ಹಜ್ ಹಾಗೂ ವಕ್ಫ್ ಸಚಿವ ಪ್ರಭು ಚವ್ಹಾಣ್ ಅವರು ಗುರುವಾರ ಕಲಬುರಗಿಯ ಪಶು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಿಢೀರನೆ ಭೇಟಿ ನೀಡಿದರು.
ಸಚಿವರು ಆಸ್ಪತ್ರೆಯ ಸಿಬ್ಬಂದಿ ಹಾಜರಾತಿ ಪುಸ್ತಕ ಮತ್ತು ಪೀಠೋಪಕರಣಗಳನ್ನು ಪರಿಶೀಲಿಸಿದರು. ಪಶು ಆಸ್ಪತ್ರೆಗೆ ತಮ್ಮ ಜಾನುವಾರುಗಳನ್ನು ತೆಗೆದುಕೊಂಡು ಬಂದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ಪಶು-ಪ್ರಾಣಿಗಳಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಸೂಕ್ತ ಚಿಕಿತ್ಸೆ ಮತ್ತು ಜೌಷಧಿಗಳನ್ನು ನೀಡಬೇಕು ಎಂದು ಪಶು ವೈದ್ಯರಿಗೆ ಸಚಿವರು ಸೂಚಿಸಿದರು.
ಈ ಸಂದರ್ಭದಲ್ಲಿ ಉಪನಿರ್ದೇಶಕ ಡಾ.ವಿ.ಹೆಚ್.ಹನುಮಂತಪ್ಪ ಸೇರಿದಂತೆ ವಿವಿಧ ಅಧಿಕಾರಿ-ಸಿಬ್ಬಂದಿಗಳು ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss